About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಕಬ್ಬಿನ ಲಾರಿಯೊಂದಿಗೆ ಸುವರ್ಣ ವಿಧಾನಸೌಧದ ವರಣದಲ್ಲಿ ರೈತರ ಪ್ರತಿಭಟನೆ

10ಕ್ಕೂ ಹೆಚ್ಚು ರೈತರ ಬಂಧನ

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಳಗಾವಿಗೆ ಬರಬೇಕು. ಎಫ್‌ಆರ್‌ಪಿ ದರ ನಿಗದಿ ಪಡಿಸಬೇಕು ಎಂದು ಆಗ್ರಹಿಸಿ ಭಾನುವಾರ ರೈತರು ಕಬ್ಬಿನ ಲಾರಿಯೊಂದಿಗೆ ಸುವರ್ಣ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆೆಲೆಯಲ್ಲಿ 10ಕ್ಕೂ ಹೆಚ್ಚು ರೈತರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ.

ಅಶೋಕ ಯಮಕನಮರಡಿ ನೇತೃತ್ವದಲ್ಲಿ ಕೆಲವು ರೈತರು ಕಬ್ಬು ತುಂಬಿದ ಐದು ಲಾರಿಗಳನ್ನು ಸುವರ್ಣ ವಿಧಾನಸೌಧದ ಆವರಣಕ್ಕೆ ನುಗ್ಗಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಲಾರಿಗಳನ್ನು ತಡೆದು ಅವುಗಳನ್ನು ಸುವರ್ಣ ವಿಧಾನಸೌಧಕ್ಕೆೆ ನುಗ್ಗಿಸಿದ್ದು, ಇದನ್ನು ತಡೆಯಲು ಮುಂದಾದ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದ ರೈತ ಮುಖಂಡರು, ಮುಖ್ಯಮಂತ್ರಿ ಭರವಸೆ ಮೇರೆಗೆ ಧರಣಿ ಕೈಬಿಟ್ಟಿದ್ದರು. ನ.19ರಂದು ಬೆಳಗಾವಿಗೆ ಬರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಹೀಗಾಗಿ, ಪ್ರತಿಭಟನೆ ಕೈಬಿಡಲಾಗಿದೆ ಎಂದು ರೈತರು ತಿಳಿಸಿದ್ದರು. ಆದರೆ, ಮುಖ್ಯಮಂತ್ರಿ ಮಾತು ತಪ್ಪಿದ್ದಾರೆ. ಅವರು ಬರುವ ಬದಲಿಗೆ ನಮಗೆ ಬೆಂಗಳೂರಿಗೆ ಬರುವಂತೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರೈತ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಹೀಗಾಗಿ, ಅವರು ಇಲ್ಲಿಗೆ ಬರುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ರೈತರು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Language
Close