ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ: ಪರಮೇಶ್ವರ್‌ರನ್ನು ಬದಲಿಸಿ ಸಿದ್ದರಾಮಯ್ಯಗೆ ಮಣೆ

Posted In : ರಾಜ್ಯ

ಬೆಂಗಳೂರು/ ಹೈದರಾಬಾದ್: ಹೈದರಾಬಾದ್‌ನ ಹೊಟೇಲ್‌ನಲ್ಲಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ [ಸಿಎಲ್‌ಪಿ] ನಾಯಕರಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.

ಅಚ್ಚರಿಯ ಬೆಳವಣಿಗೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ನಿನ್ನೆಯಷ್ಟೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಶಾಸಕಾಂಗ ಪಕ್ಷದ ನಾಯರನ್ನಾಗಿ ಆರಿಸಲಾಗಿತ್ತು. ಆದರೆ ಇಂದು ಹೈದರಾಬಾದ್‌ನ ಹೊಟೆಲ್‌ನಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ.

ನಾಳೆ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಮಹತ್ವದ ದಿನವಾಗಿದ್ದು, ನಾಳೆ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ವಿಶ್ವಾಸ ಮತ ಸಾಬೀತು ಮಾಡಬೇಕಿದೆ. ಹಾಗಾಗಿ ಹಿರಿಯರು ಅನುಭವಿಗಳಾದ ಹಾಗೂ ಉತ್ತಮ ವಾಕ್ಪಟು, ಹಠಮಾರಿಯೂ ಆಗಿರುವ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದರೆ ಸೂಕ್ತ ಎಂಬ ಅನಿಸಿಕೆಯಿಂದ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆರಿಸಲಾಗಿದೆ.

 

Leave a Reply

Your email address will not be published. Required fields are marked *

4 × 4 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top