ಕಾಡಾನೆಗಳ ದಾಳಿಗೆ ನಲುಗಿದ ಅನ್ನದಾತರು

Posted In : ರಾಜ್ಯ, ಹಾಸನ

ಸಕಲೇಶಪುರ: ತಾಲೂಕಿನ ಗಡಿ ಗ್ರಾಮಗಳಾದ ನಿಡನೂರು, ಅಬ್ಬನ ಮತ್ತು ರಾಜೇಂದ್ರಪುರ ಗ್ರಾಮಗಳಲ್ಲಿ ಕಾಡಾನೆ ಹಿಂಡುಗಳು ಈ ಗ್ರಾಮಗಳ ಜಮೀನುಗಳ ಮೇಲೆ ಕಳೆದ ರಾತ್ರಿ ದಾಳಿ ಮಾಡಿ ಅಪಾರ ಪ್ರಮಾಣದ ಫಸಲಿಗೆ ಬಂದಿದ್ದ ಬೆಳೆಗಳನ್ನು ನಾಶ ಮಾಡಿವೆ.

ಪದೇ ಪದೇ ಕಾಡಾನೆ ಹಾಗೂ ಮನುಷ್ಯನ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಸರಕಾರದಿಂದ ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿ ಬೃಹತ್ ಬೈಕ್ ರ್ಯಾಲಿ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಆಲೂರು ತಾಲೂಕು ಘಟಕದ ಅಧ್ಯಕ್ಷ ನಟರಾಜ್ ತಿಳಿಸಿದರು.

ಅವರು ಪಾಳ್ಯ ಮತ್ತು ಬೆಳಗೋಡು ಹೋಬಳಿಯ ಗ್ರಾಮಗಳಲ್ಲಿ ಕಾಡಾನೆಯಿಂದ ರೈತರು ಬೆಳೆದ ಬೆಳೆಗಳನ್ನು ನಷ್ಟ ಪಡಿಸಿರುವ ಸ್ಥಳಗಳಿಗೆ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸರಕಾರ ಸುಮಾರು ಇಪ್ಪತ್ತೈದು ವರ್ಷಗಳಿಂದಲೂ ಶಾಶ್ವತ ಪರಿಹಾರ ಕಂಡುಹಿಡಿಯುವುದಾಗಿ ಹೇಳುತ್ತಲೇ ರೈತರ ಮೂಗಿಗೆ ತುಪ್ಪ ಸವರುತ್ತಲೇ ಬಂದಿದೆ. ಕಾಡಾನೆ ಹಿಡಿಯುವ ನೆಪದಲ್ಲಿ ಸರಕಾರದ ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಕೋಟಿ ಕೋಟಿ ಹಣವನ್ನು ಲೂಟಿ ಮಾಡುತ್ತಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

16 − seven =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top