ಗೌರಿ ಹಂತಕನಿಗೆ ಮಂಪರು ಪರೀಕ್ಷೆಗೆ ಕೋರ್ಟ್ ಅಸ್ತು

Posted In : ಬೆಂಗಳೂರು, ರಾಜ್ಯ

 ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಮೂಲದ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ವಿಶೇಷ ತನಿಖಾ ತಂಡಕ್ಕೆ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ.

ಕಳೆದ ಮಾ.9ರಂದು ನವೀನ್ ಅಲಿಯಾಸ್ ಹೊಟ್ಟೆ ಮಂಜನನ್ನು ಮಂಪರು ಪರೀಕ್ಷೆಗೊಳಪಡಿಸಲು ಅಧಿಕಾರಿಗಳು ನ್ಯಾಯಾಲಯದ ಅನುಮತಿ ಕೋರಿದ್ದರು. ನಗರದ 3ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ನ್ಯಾಯಾಧೀಶರು ಆರೋಪಿಯನ್ನು ಮಂಪರು ಪರೀಕ್ಷೆ ನಡೆಸಲು ಒಪ್ಪಿಗೆ ಇದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಆರೋಪಿ ಆರೋಗ್ಯಕ್ಕೆ ಯಾವುದೇ ಸಮಸ್ಯೆ ಇಲ್ಲದಿದ್ದರೆ ಅಭ್ಯಂತರವಿಲ್ಲ ಎಂದು ತಿಳಿಸಿದೆ.

ಬಳಿಕ ನ್ಯಾಯಾಲಯ ಆರೋಪಿ ಪರ ವಕೀಲರ ಸಮಕ್ಷಮದಲ್ಲಿ ಹಾಗೂ ಮಾನವ ಹಕ್ಕು ಮಾರ್ಗಸೂಚಿಗಳನ್ನು ಅನುಸರಿಸಿ ಮಂಪರು ಪರೀಕ್ಷೆ ನಡೆಸುವಂತೆ ಪೊಲೀಸರಿಗೆ ಸೂಚಿಸಿತು. ಸದ್ಯ ನ್ಯಾಯಾಲಯ ಒಪ್ಪಿಗೆ ಸೂಚಿಸಿದ್ದರೂ ಪರೀಕ್ಷೆಗೆ ಒಳಪಡಿಸುವ ದಿನಾಂಕವನ್ನು ಇನ್ನೂ ಎಸ್‌ಐಟಿ ತಂಡದ ವಶದಲ್ಲಿರುವ ಮದ್ದೂರಿನ ಹೊಟ್ಟೆ ಮಂಜ, ಹತ್ಯೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ವಿಚಾರಣೆ ತೀವ್ರಗೊಳಿಸಲಾಗಿದೆ. ಆರೋಪಿ ನವೀನ್‌ಗೆ ಅಹಮದಾಬಾದ್ ಅಥವಾ ಹೈದರಾಬಾದ್‌ನಲ್ಲಿ ಮಂಪರು ಪರೀಕ್ಷೆ ನಡೆಸುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

eighteen + 8 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top