ಗ್ಯಾಸ್ ಟ್ಯಾಂಕರ್- ಬಸ್ ಢಿಕ್ಕಿ: 30ಕ್ಕೂ ಅಧಿಕ ಮಂದಿಗೆ ಗಾಯ

Posted In : ಉಡುಪಿ, ರಾಜ್ಯ

ಉಡುಪಿ: ಅನಿಲ ಸಾಗಾಟದ ಟ್ಯಾಂಕರ್-ಬಸ್ಸೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸ್ ಉರುಳಿಬಿದ್ದು 30ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ.

ಕಿನ್ನಿ-ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಎಕೆಎಂಎಸ್ ವೇಗದೂತ ಬಸ್ಸಿನ ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಉರುಳಿಬಿದ್ದಿದೆ.

ಈ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 30ಕ್ಕೂ ಅಧಿಕ ಮಂದಿಗೆ ಗಾಯಗೊಂಡಿದ್ದರು. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಸಂಚಾರ ಪೊಲೀಸ್ ಸ್ಥಳವನ್ನು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

15 + seventeen =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top