About Us Advertise with us Be a Reporter E-Paper

Breaking Newsರಾಜ್ಯ

ಎರಡನೇ ಹಂತದ ‘ನಮ್ಮ ಮೆಟ್ರೊ’ ಯೋಜನೆ ಶೀಘ್ರ ಪೂರ್ಣಗೊಳಿಸಿ: ಪರಮೇಶ್ವರ್‍

ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಗೆ ಡಿಸಿಎಂ ಸೂಚನೆ

ಬೆಂಗಳೂರು: ‘ನಮ್ಮ ಮೆಟ್ರೊ’ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ರಾಜ್ಯದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‍‍ಸಿಎಲ್) ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಜತೆ ಮೆಟ್ರೊ ಎರಡನೇ ಹಂತದ ಯೋಜನೆ ಅನುಷ್ಠಾನದ ಬಗ್ಗೆ ಸೋಮವಾರ ಸಮಾಲೋಚನೆ ನಡೆಸಿದರು. ಎಲೆಕ್ಟ್ರಾನಿಕ್ ಸಿಟಿಯಲ್ಲಿ 200 ಕೋಟಿ ರು.ವೆಚ್ಚದಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಜು.೧೯ಕ್ಕೆ ರಾಜ್ಯ ಸರಕಾರ ಮತ್ತು ಇನ್ಫೋಸಿಸ್ ಪ್ರತಿಷ್ಠಾನದ ಮಧ್ಯೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.

ಡಿಸಿಎಂ ಕಚೇರಿಯಲ್ಲಿ ನಿಲ್ದಾಣದ ನೀಲನಕ್ಷೆ ಅನಾವರಣ ಮಾಡಲಾಗಿದೆ. ಮೆಟ್ರೋ ನಿಲ್ದಾಣಕ್ಕೆ 200 ಕೋಟಿ ರು. ವ್ಯಯಿಸಲಿರುವ ಇನ್ಫೋಸಿಸ್ ಸಂಸ್ಥೆ, ನಿಲ್ದಾಣಕ್ಕೆ ಬೇಕಿರುವ ಮೂಲ ಸೌಲಭ್ಯಗಳನ್ನು ಸರಕಾರ ಕಲ್ಪಿಸಲಿದೆ ಎಂದು ಡಿಸಿಎಂ ಹೇಳಿದರು.

ಕುಂದು ಕೊರತೆ ಬಗ್ಗೆ ಚರ್ಚೆ: ನಗರದಲ್ಲಿನ ಸಮಸ್ಯೆಗಳ ಕುರಿತು ನಗರ ಜಿಲ್ಲಾ ವ್ಯಾಪ್ತಿಯ ಶಾಸಕರು, ಸಚಿವರು, ಸಂಸದರೊಂದಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಉಪಮುಖ್ಯಂತ್ರಿ ಪರಮೇಶ್ವರ ಮಹತ್ವ ಚರ್ಚೆ ನಡೆಸಿದರು.

ಸಭೆಯಲ್ಲಿ ಜನ ಪ್ರತಿನಿಧಿಗಳು ಕ್ಷೇತ್ರಗಳ ವ್ಯಾಪ್ತಿಯ ಸಮಸ್ಯೆಗಳನ್ನು ಬಿಚ್ಚಿಟ್ಟರು. ಕಸ, ಕೆರೆ, ರಾಜಕಾಲುವೆ ಒತ್ತುವರಿ, ಕಸ, ಸಂಚಾರ ದಟ್ಟನೆ, ನೆನಗುದಿಗೆ ಬಿದ್ದಿರುವ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು. ಬೆಳ್ಳಂದೂರು ಕೆರೆ ಅಭಿವೃದ್ಧಿ, ಕಸದ ಸಮಸ್ಯೆ, ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ಭರವಸೆ ನೀಡಿದರು.

ಸಭೆಯಲ್ಲಿ ಮೇಯರ್ ಸಂಪತ್ ರಾಜ್, ಶಾಸಕರಾದ ಬೈರತಿ ಸುರೇಶ, ಸತೀಶ್ ರೆಡ್ಡಿ, ಗೋಪಾಲಯ್ಯ, ಸಚಿವ ಕೃಷ್ಣ ಬೈರೇಗೌಡ ಮತ್ತಿತರರು ಭಾಗಿಯಾಗಿದ್ದರು.

 

Tags

Related Articles

Leave a Reply

Your email address will not be published. Required fields are marked *

Language
Close