About Us Advertise with us Be a Reporter E-Paper

ದೇಶಪ್ರಚಲಿತ

ನ್ಯಾಯಾಲಯ ಕಲಾಪ ನೇರ ಪ್ರಸಾರಕ್ಕೆ ಸುಪ್ರೀಂ ಅಸ್ತು

ಅತ್ಯಾಚಾರ, ವೈವಾಹಿಕ ಮತ್ತಿತರ ವಿಚಾರಗಳಲ್ಲಿನ ಗೌಪ್ಯ ವಿಚಾರಣೆ ಹೊರತುಪಡಿಸಿ ನ್ಯಾಯಾಲಯ ಕಲಾಪಗಳ ನೇರ ಪ್ರಸಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ಡಿ ವೈ ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ, ನ್ಯಾಯಾಲಯದಲ್ಲಿ ಕೇಸು ವಿಚಾರಣೆಗಳ ನೇರ ಪ್ರಸಾರಕ್ಕೆ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸಲು ಸರಕಾರಕ್ಕೆ ಹೇಳಿದೆ.

ನ್ಯಾಯಾಲಯಗಳಲ್ಲಿ ವಿಚಾರಣೆಗಳ ನೇರ ವೀಕ್ಷಣೆ, ವಿಡಿಯೊ ರೆಕಾರ್ಡಿಂಗ್ ಅಥವಾ ನ್ಯಾಯಾಂಗ ಪ್ರಕ್ರಿಯೆಗಳ ಲಿಪ್ಯಂತರಗಳ ಕುರಿತು ಸಲ್ಲಿಸಲಾಗಿದ್ದ ಮನವಿ ಬಗ್ಗೆ ತನ್ನ ಅಭಿಪ್ರಾಯ ತಿಳಿಸುವಂತೆ ಸುಪ್ರೀಂ ಕೋರ್ಟ್ ಕಳೆದ ಮೇ 3ರಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಇದಕ್ಕೆ ಈ ಹಿಂದೆ ತನ್ನ ಅಭಿಪ್ರಾಯ ತಿಳಿಸಿದ್ದ ಸರ್ಕಾರ ಪರ ವಕೀಲರು ಹಲವು ದೇಶಗಳಲ್ಲಿ ನ್ಯಾಯಾಲಯ ಕಲಾಪಗಳ ನೇರ ವೀಕ್ಷಣೆ ಪದ್ಧತಿಯಿದೆ ಎಂದು ಹೇಳಿದ್ದರು.

Related Articles

Leave a Reply

Your email address will not be published. Required fields are marked *

Language
Close