About Us Advertise with us Be a Reporter E-Paper

ಪಾಲಿಟಿಕ್ಸ್ರಾಜ್ಯ

ಬಿಜೆಪಿಯವರು ನಮ್ಮ ವಿರುದ್ಧ ಅಪಪ್ರಚಾರ ಮಾಡಿ ಗೆದ್ದರು: ಸಿದ್ದರಾಮಯ್ಯ

siddaramaiah

ಬೆಂಗಳೂರು: ಬಿಜೆಪಿ ನಾಯಕರ ಅಪಪ್ರಚಾರದಿಂದ ನಾವು ಚುನಾವಣೆಯಲ್ಲಿ ಸೋಲಬೇಕಾಯಿತು. ನಾವು ನೀಡಿದ ಜನಪ್ರಿಯ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಬಿಜೆಪಿಯವರು ಸುಳ್ಳು ಪ್ರಚಾರ ಮಾಡಿದ್ದರಿಂದ ನಿರೀಕ್ಷಿತ ಸ್ಥಾನ ಗೆಲ್ಲಲಾಗಲಿಲ್ಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಲ್ಲಿನ ಅರಮನೆ ಮೈದಾನದಲ್ಲಿ ನಡೆದ ದಿನೇಶ್​ ಗುಂಡೂರಾವ್​ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್​ ಗಾಂಧಿ ನನ್ನ ಮೇಲೆ ಮತ್ತು ಪರಮೇಶ್ವರ್​ ಮೇಲೆ ಅಪಾರವಾದ ವಿಶ್ವಾಸ ಇಟ್ಟಿದ್ದರು, ಆದರೆ ಅದನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂಬ ವಿಶ್ವಾಸವನ್ನು ರಾಹುಲ್​ ಗಾಂಧಿ ಇಟ್ಟುಕೊಂಡಿದ್ದರು. ಅವರಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ನಮ್ಮಿಂದ ಆದಲಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯವರು 30 ಮಂದಿ ಮತದಾರರಿಗೆ ಒಬ್ಬ ಕಾರ್ಯಕರ್ತನನ್ನು ನೇಮಿಸಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿದರು. ಹಿಂದುತ್ವದ ಕುರಿತು ಮನೆಮನೆಗೆ ಹೋಗಿ ಸುಳ್ಳು ಪ್ರಚಾರಗಳನ್ನು ಮಾಡಿದರು. ಅವರ ಸುಳ್ಳು ಪ್ರಚಾರಕ್ಕೆ ಪ್ರತಿಯಾಗಿ ಸತ್ಯ ವಿಷಯವನ್ನು ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ನಾವು ವಿಫಲರಾದೆವು. ಸೋಲಿಗೆ ನಾನು ಯಾರನ್ನೂ ಹೊಣೆ ಮಾಡುವುದಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವ ಅಪಪ್ರಚರಕ್ಕೆ ಆಸ್ಪದ ಕೊಡಬಾರದು. ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು. ನಮ್ಮ ಆಡಳಿತವನ್ನು ಜನ ಮರೆಯಲಿಲ್ಲ. ನಾವು ಕೆಲಸ ಮಾಡಿದರೆ ಮತ್ತೆ ಜನ ನಮ್ಮ ಕೈ ಹಿಡಿಯುತ್ತಾರೆ. 28 ಲೋಕಸಭೆ ಕ್ಷೇತ್ರಗಳಲ್ಲಿ ನಾವು 20 ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಬೇಕು. ಅದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನೂತನ ಅಧ್ಛ್ಯಕ್ಷರಾದ ದಿನೇಶ್‍ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರಿಗೆ ಎಲ್ಲಾ ರೀತಿಯ ಸಹಕಾರ, ಬೆಂಬಲ ನೀಡಬೇಕು ಎಂದು ಹೇಳಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close