ಬಿಜೆಪಿ ಕಾರ್ಯಕರ್ತ ಜುಬೇರ್ ಹತ್ಯೆಗೆ ಖಂಡಿಸಿ ಪ್ರತಿಭಟನೆ

Posted In : ಚಿತ್ರದುರ್ಗ, ರಾಜ್ಯ

ಚಿತ್ರದುರ್ಗ: ಬಿಜೆಪಿಯ ಕಾರ್ಯಕರ್ತ ಜುಬೇರ್‌ನನ್ನು ಮಂಗಳೂರಿನಲ್ಲಿ ಹತ್ಯೆಗೈದಿರುವ ಹಂತಕರನ್ನು ಕೂಡಲೆ ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿ ಸಚಿವ ಯು.ಟಿ.ಖಾದರ್ ಭಾವಚಿತ್ರವನ್ನು ದಹನಗೊಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಮಾತನಾಡುತ್ತ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಜುಬೇರ್‌ನನ್ನು ಕೆಲವು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಸಚಿವ ಯು.ಟಿ.ಖಾದರ್ ಪರೋಕ್ಷವಾಗಿ ಕೊಲೆಗಡುಕರಿಗೆ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ಅಲ್ಪಸಂಖ್ಯಾತರ ಹಾಗೂ ರಾಜ್ಯದ ಜನತೆಯ ಮೇಲೆ ವಿಶ್ವಾಸವಿದ್ದರೆ ಜುಬೇರ್ ಹಂತಕರನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕು. ಮೇಲ್ನೋಟಕ್ಕೆ ಸಚಿವ ಯು.ಟಿ.ಖಾದರ್ ನಯವಾಗಿ ಕಾಣುತ್ತಿದ್ದಾರೆ. ಆದರೆ ನಿಜವಾಗಿಯೂ ಅವರೊಬ್ಬ ಗೋಮುಖ ವ್ಯಾಘ್ರ ಎಂದು ಟೀಕಿಸಿದರು.

Leave a Reply

Your email address will not be published. Required fields are marked *

three × 1 =

 
Back To Top