ಬೆಳಗಾವಿ: ಕಲಾಪ ವೇಳೆ ರೈತರ ಮುತ್ತಿಗೆ

Posted In : ಬೆಳಗಾವಿ

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಮುತ್ತಿಗೆ

ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಂದಗಢದಿಂದ ಪಾದಯಾತ್ರೆ

ಬೆಳಗಾವಿ: ಅನ್ನದಾತರ ಅಳಲು, ಸಾಲಮನ್ನಾ, ಕಬ್ಬಿನ ದರ ನಿಗದಿ, ರೈತರ ಬೆಳೆಗೆ ಮಾರುಕಟ್ಟೆ ಬೆಲೆ ಸೇರಿದಂತೆ ಹಲವು ಬೇಡಿಕೆ ಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಸುವರ್ಣಸೌಧಕ್ಕೆ ಸೋಮವಾರ ಮುತ್ತಿಗೆ ಹಾಕುವ ಪ್ರಯತ್ನ ಮಾಡಲಾಯಿತು. ರೈತರು ಸುವರ್ಣ ಸೌಧವನ್ನು ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದಾಗ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಂದಗಢದಿಂದ ಪಾದಯಾತ್ರೆ ಮೂಲಕ ಆಗಮಿಸಿದ ರೈತರು ಸರಕಾರದ ವಿರುದ್ಧ ಘೋಷಣೆ ಕೂಗಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ. ಸಹಕಾರ ಸಂಘಗಳ ರೈತರ ಕೇವಲ 50 ಸಾವಿರ ರು. ಮನ್ನಾ ಮಾಡಿದೆ. ಸಂಪೂರ್ಣ ಸಾಲಮನ್ನಾ ಮಾಡಬೇಕು. ಕಬ್ಬಿಗೆ ದರ ನಿಗದಿ ಮಾಡಬೇಕು. ರೈತ ಬೆಳೆದ ಬೆಳೆಗೆ ಮಾರುಕಟ್ಟೆ ದೊರೆಯುವಂತೆ ಮಾಡಬೇಕೆಂದು ಆಗ್ರಹಿಸಲಾಯಿತು. ಪ್ರತಿ ಬಾರಿ ಅಧಿವೇಶನ ನಡೆಯುವ ಸಂದರ್ಭ ಯಾವುದೇ ಬೇಡಿಕೆಗಳೂ ಈಡೇರಿಲ್ಲ. ಹೀಗಾಗಿ ಮತ್ತೆ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

 

Leave a Reply

Your email address will not be published. Required fields are marked *

15 + 5 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Friday, 23.02.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಪಾಲ್ಗುಣ ಮಾಸ, ಶುಕ್ಲಪಕ್ಷ, ಅಷ್ಟಮಿ, ಶುಕ್ರವಾರ, ನಿತ್ಯ ನಕ್ಷತ್ರ-ಕೃತ್ತಿಕಾ, ಯೋಗ-ವೈಧೃತಿ, ಕರಣ-ಭದ್ರೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 7.30-9.00 3.00-4.30

Read More

 

Friday, 23.02.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಪಾಲ್ಗುಣ ಮಾಸ, ಶುಕ್ಲಪಕ್ಷ, ಅಷ್ಟಮಿ, ಶುಕ್ರವಾರ, ನಿತ್ಯ ನಕ್ಷತ್ರ-ಕೃತ್ತಿಕಾ, ಯೋಗ-ವೈಧೃತಿ, ಕರಣ-ಭದ್ರೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 7.30-9.00 3.00-4.30

Read More

Back To Top