ಬ್ರಿಗೇಡ್ ಗೆ ಬಿಎಸ್ ವೈ ಸಮ್ಮತಿ- ಈಶ್ವರಪ್ಪ

Posted In : ಚಿತ್ರದುರ್ಗ, ರಾಜ್ಯ

ಚಿತ್ರದುರ್ಗ: ರಾಜಕೀಯ ರಹಿತವಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಚಿತ್ರದುರ್ಗದ ಮಾದಾರಗುರು ಪೀಠದ ಶ್ರೀಗಳ ಆಶೀರ್ವಾದ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಮುಂದುವರೆಯಲಿದೆ. ಇತ್ತೀಚಿನ ದಿನಗಳಲ್ಲಿ ಹಿಂದೂ ಮಠಮಾನ್ಯ ಹಾಗೂ ಸ್ವಾಮೀಜಿಗಳನ್ನು ಟೀಕಿಸುವುದು ಫ್ಯಾಶನ್ ಆಗುತ್ತಿದೆ. ವಕ್ಫ್ ಬೋರ್ಡ್‌ನಲ್ಲಿ 50 ಸಾವಿರ ಕೋಟಿ ಅವ್ಯವಹಾರ ನಡೆದಿದೆ. ಆದರೆ ರಾಜ್ಯ ಸರಕಾರಕ್ಕೆ ವಕ್ಫ್ ಬೋರ್ಡ್‌ನ್ನು ಪ್ರಶ್ನೆ ಮಾಡವಷ್ಟು ಧಮ್ಮಿಲ್ಲ ಎಂದು ಸರಕಾರದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದರು. 

ಇದೇ ಸಂದರ್ಭದಲ್ಲಿ ಕೆಲವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಮುತ್ತಿಗೆ ಹಾಕುವ ಷಡ್ಯಂತ್ರವನ್ನು ರೂಪಿಸುತ್ತಿದ್ದಾರೆ. ಒಂದು ವೇಳೆ ಮಠಕ್ಕೆ ಮತ್ತಿಗೆ ಹಾಕಲು ಹೊರಟರೆ ರಾಜ್ಯಾದ್ಯಂತ ಧರಣಿ ಕೈಗೊಳ್ಳುತ್ತೇವೆ ಎಂದು ಈಶ್ವರಪ್ಪ ಎಚ್ಚರಿಕೆ ನೀಡಿದರು.
 

Leave a Reply

Your email address will not be published. Required fields are marked *

12 + twenty =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top