ಮಕ್ಕಾ ಮಸೀದಿ ಸ್ಪೋಟ ತೀರ್ಪು ನೀಡಿದ್ದ ನ್ಯಾಯಾಧೀಶ ರಾಜಿನಾಮೆ!

Posted In : ದೇಶ

ದೆಹಲಿ: ಇಂದು ಬೆಳಿಗ್ಗೆ ಮಕ್ಕಾ ಮಸೀದಿ ಸ್ಪೋಟ ಪ್ರಕರಣದ ಆರೋಪಿಗಳನ್ನು ಖುಲಾಸೆ ಗೊಳಿಸಿ ತೀರ್ಪು ನಿಡಿದ್ದ ನ್ಯಾಯಾಧೀಶ ಅಚ್ಚರಿಯ ಬೆಳವಣಿಯೊಂದರಲ್ಲಿ ಸಲ್ಲಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಧೀಶ ರವೀಂದರ್ ರೆಡ್ಡಿ ತೀರ್ಪು ನೀಡಿದ ಕೆಲವೇ ಗಂಟೆಗಳಲ್ಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾಗೆ ರಾಜಿನಾಮೆ ನೀಡಿದ್ದಾರೆ. ಈ ಬೆಳವಣಿಗೆ ರಷ್ಟ್ರಾದ್ಯಂತ ಹೊಸ ಅಲೆ ಎಬ್ಬಿಸಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ರಾಜಿನಾಮೆಯಲ್ಲಿ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನಿಡುತ್ತಿದ್ದೇನೆ ಎಂದು ದಾಖಲಿಸಿದ್ದಾರೆ. ಇಂದು ಬೆಳಿಗ್ಗೆ ಹೈದರಬಾದ್‌ನ ಮೆಕ್ಕಾ ಮಸೀದಿ ಸ್ಪೋಟ ಪ್ರಕರಣದಲ್ಲಿ, ಮುಖ್ಯ ಆರೋಪಿ ಸ್ವಾಮಿ ಅಸೀಮಾನಂದ ಸಹಿತ ಒಟ್ಟು ಐದು ಮಂದಿ ಸಾಕ್ಷಿಗಳ ಕೊರತೆ ಇರುವುದರಿಂದ ಖುಲಾಸೆಗೊಳಿಸಿ ತೀರ್ಪು ನೀಡಿದ್ದರು. ಪ್ರಾಸಿಕ್ಯೂಶನ್, ಯಾವುದೇ ಆರೋಪಗಳನ್ನು ಸಾಬೀತು ಪಡಿಸಲು ವಿಫಲವಾದ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸಲಾಗಿತ್ತು.

2007 ಮೇ 18ರಂದು ಶುಕ್ರವಾರ ಪ್ರಾರ್ಥನೆ ಸಮಯದಲ್ಲಿ ನಡೆದ ಬ್ಲಾಸ್ಟ್ನಲ್ಲಿ ಒಂಭತ್ತು ಮಂದಿ ಮೃತಪಟ್ಟು 58 ಮಂದಿ ಗಾಯಗೊಂಡಿದ್ದರು.

ನ್ಯಾಯಧೀಶರ ರಾಜಿನಾಮೆ ಕುರಿತು ಪ್ರತಿಕ್ರೀಯಿಸಿರುವ ಆಲ್ ಇಂಡಿಯಾ ಮಜ್ಲಿಸು ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ನ್ಯಾಯಾಧೀಶರ ಈ ನಡೆ ಆಶ್ಚರ್ಯ ತರಿಸಿದೆ ಎಂದು ಹೇಳಿದ್ದಾರೆ.

 

Leave a Reply

Your email address will not be published. Required fields are marked *

14 − eight =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Wednesday, 25.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ದಶಮಿ, ಬುಧವಾರ, ನಿತ್ಯನಕ್ಷತ್ರ-ಮಖಾ, ಯೋಗ-ವೃದ್ಧಿ, ಕರಣ-ಗರ

ರಾಹುಕಾಲಗುಳಿಕಕಾಲಯಮಗಂಡಕಾಲ
12.00-1.30 10.30-12.00 7.30-9.00

Read More

 

Wednesday, 25.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ದಶಮಿ, ಬುಧವಾರ, ನಿತ್ಯನಕ್ಷತ್ರ-ಮಖಾ, ಯೋಗ-ವೃದ್ಧಿ, ಕರಣ-ಗರ

ರಾಹುಕಾಲಗುಳಿಕಕಾಲಯಮಗಂಡಕಾಲ
12.00-1.30 10.30-12.00 7.30-9.00

Read More

Back To Top