About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಮಹದಾಯಿ ನೀರು ಹಂಚಿಕೆ: ರಾಜ್ಯಕ್ಕೆ ಅನ್ಯಾಯ ತಪ್ಪಿಸಲು ತಜ್ಞರಿಗೆ ಸಿಎಂ ಮನವಿ

ಎಲ್ಲ ಆಯಾಮಗಳಿಂದ ಪರಿಶೀಲಿಸಿ ಸಲಹೆ ನೀಡಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ತಪ್ಪಿಸಲು ಎಲ್ಲ ಆಯಾಮಗಳಿಂದ ಪರಿಶೀಲಿಸಿ ಸಲಹೆ ನೀಡಲು ಮತ್ತು ನೀರಾವರಿ ತಜ್ಞರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ಮಹದಾಯಿ ನ್ಯಾಯಾಧಿಕರಣದ ನೀರು ಹಂಚಿಕೆ ತೀರ್ಪಿನ ಕುರಿತು ಮುಂದೆ ಕೈಗೊಳ್ಳಬೇಕಾದ ಕ್ರಮದ ಕುರಿತು ಕಾನೂನು ಮತ್ತು ನೀರಾವರಿ ತಜ್ಞರೊಂದಿಗೆ ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಅವರು, ಆ ಭಾಗದ ಜನರ ಹಿತದೃಷ್ಟಿಯಿಂದ ಸರಕಾರ ಕೈಗೊಳ್ಳಬೇಕಾದ ಕ್ರಮಗಳನ್ನು ಎಲ್ಲ ಆಯಾಮಗಳಿಂದ ಪರಿಶೀಲಿಸಿ, ಚರ್ಚಿಸಿ ಸಲಹೆ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಉದಯ ಹೊಳ್ಳ, ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಮತ್ತಿತರರು ಇದ್ದರು.

Tags

Related Articles

Leave a Reply

Your email address will not be published. Required fields are marked *

Language
Close