lakshmi-electricals

ಲಾರಿ- ಬೈಕ್ ಡಿಕ್ಕಿ:ಮೂರು ಸಾವು

Posted In : ಚಿತ್ರದುರ್ಗ, ರಾಜ್ಯ

ಚಿತ್ರದುರ್ಗ: ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಬಳಿ ಈ ಘಟನೆ ನಡೆದಿದೆ. ಚಿತ್ರನಾಯಕನಹಳ್ಳಿ ಗ್ರಾಮದವರಾದ ನರಸಿಂಹಪ್ಪ(45), ರತ್ನಮ್ಮ(40), ಅಕ್ಕಮ್ಮ (32) ಮೃತಪಟ್ಟ ದುರ್ದೈವಿಗಳು. ಮೃತರು ಬೈಕಿನಲ್ಲಿ ಸ್ವಗ್ರಾಮಕ್ಕೆ ಹೋಗುತ್ತಿರುವಾಗ ಮರಳನ್ನು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತರಾಗಿದ್ದಾರೆ. ತಳಕು ಪೊಲೀಸರು ಸ್ಥಳವನ್ನು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

five + seventeen =

 
Back To Top