About Us Advertise with us Be a Reporter E-Paper

ವಿದೇಶ

ವರುಣನ ಅಬ್ಬರ: ಚೀನಾ ತತ್ತರ

ಬೀಜಿಂಗ್: ಚೀನಾದ್ಯಂತಾ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಲ್ಲಿನ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನೀರನ ರಭಸಕ್ಕೆ ಹಲವು ಸೇತುವೆಗಳು ಕೊಚ್ಚಿ ಹೋಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.
ಚೀನಾ ಸೇನೆ ಸಾವಿರಾರು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುತ್ತಿದ್ದು, ಹಲವರು ಪ್ರವಾಹದಲ್ಲಿ ಸಿಲುಕಿದ್ದಾರೆ. ಅಲ್ಲದೇ ಹಲವು ರೈಲುಗಳು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಚೀನಾ ಮಾಧ್ಯಮಗಳು ವರದಿ ಮಾಡಿವೆ.ಈಶಾನ್ಯ ಚೀನಾದ ಸಿಚುವಾನ್‍ ಪ್ರಾಂತ್ಯದಲ್ಲಿ ಪ್ರವಾಹ ಉಂಟಾಗು ಭೀತಿ ಇದೆ ಎಂದು ಚೀನಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರವಾಹದಿಂದಾಗಿ ಸಾವಿರಾರು ಗ್ರಾಮಗಳು ಜಲಾವೃತಗೊಂಡಿವೆ. ಈ ಪ್ರದೇಶಗಳಲ್ಲಿ ಸೇನೆ ಭರದಿಂದ ರಕ್ಷಣಾ ಕಾರ್ಯವನ್ನು ಮುಂದುವರಿಸಿದೆ.

Tags

Related Articles

Leave a Reply

Your email address will not be published. Required fields are marked *

Language
Close