ವೇದಿಕೆಯಲ್ಲಿ ಅರೆನಗ್ನ ಚಿತ್ರವೀಕ್ಷಿಸಿದ ತನ್ವೀರ್ ಸೇಠ್

Posted In : ರಾಜ್ಯ, ರಾಯಚೂರು

ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಅವರು ಮೊಬೈಲ್‌ನಲ್ಲಿ ಅರೆನಗ್ನ ಚಿತ್ರಗಳನ್ನು ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಖಾಸಗಿ ಸುದ್ದಿವಾಹಿನಿ ಕ್ಯಾಮೆರಾಗೆ ಸೆರೆ ಸಿಕ್ಕಿರುವ ಘಟನೆ ನಡೆದಿದೆ.

ನಗರದ ಪಂಡಿತ ಸಿದ್ಧರಾಮಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಟಿಪ್ಪು ಕುರಿತು ಭಾರತ ಸ್ವಾತಂತ್ರ್ಯ ಹೋರಾಟ ದೇಶಭಕ್ತಿ ಕುರಿತು ಮತ್ತು ಅಲ್ಪ ಸಂಖ್ಯಾತರಿಗೆ ಶಿಕ್ಷಣ ಕುರಿತು ದೀರ್ಘ ಭಾಷಣ ಮುಗಿಸಿದ ಜಿಲ್ಲಾ ಉಸ್ತುವಾರಿ ಸಚಿವ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಅವರು ವಿಶೇಷ ಅತಿಥಿ ಉಪನ್ಯಾಸ ಭಾಷಣದ ವೇಳೆ ವೇದಿಕೆಯಲ್ಲಿ ಕುಳಿತು ನನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಅರೆನಗ್ನ ಚಿತ್ರ ವೀಕ್ಷಣೆ ಮಾಡಿದ್ದು ಇದೀಗ ಕಾಂಗ್ರೆಸ್ ಸರಕಾರಕ್ಕೆ ತಲೆ ತಗ್ಗಿಸುವಂತೆ ಮಾಡಿದ್ದಾರೆ.

ಸಂಸದ ಬಿ. ವಿ. ನಾಯಕ್, ಮಾಜಿ ಶಾಸಕ ಸೈಯದ್ ಯಾಸೀನ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಇರುವುದನ್ನು ಗಮನಿಸದೆ ಮೊಬೈಲ್‌ನಲ್ಲಿ ಅರೆನಗ್ನ ಚಿತ್ರಗಳನ್ನು ವೀಕ್ಷಣೆ ಮಾಡಿರುವುದು ಶಿಕ್ಷಣ ಸಚಿವರಿಗೆ ಶೋಭೆ ತರುವಂತಹದಲ್ಲ. ಕೂಡಲೇ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂಬ ಒತ್ತಾಯಗಳು ವಿರೋಧ ಪಕ್ಷದ ಮುಖಂಡರಿಂದ ಕೇಳಿ ಬರುತ್ತಿವೆ.

Leave a Reply

Your email address will not be published. Required fields are marked *

one × five =

 
Back To Top