lakshmi-electricals

ಶ್ರೀನಿವಾಸ್ ಪ್ರಸಾದ್ ಶೀಘ್ರ ಬಿಜೆಪಿ ಸೇರಲಿದ್ದಾರೆ: ಆರ್ ಅಶೋಕ್

Posted In : ಉಡುಪಿ, ರಾಜ್ಯ

ಉಡುಪಿ: ಮಾಜಿ ಸಚಿವ ಕಾಂಗ್ರೆಸ್ ಶಾಸಕ ವಿ.ಶ್ರೀನಿವಾಸ್ ಪ್ರಸಾದ್ ಅವರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಅವರು  ಶುಕ್ರವಾರದಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಗೌರವದಿಂದ ಮನನೊಂದು ಶ್ರೀನಿವಾಸ್ ಪ್ರಸಾದ್ ಪಕ್ಷ ತ್ಯಜಿಸುತ್ತಿದ್ದು, ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದರು.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರು ಬಿಜೆಪಿ ಸೇರುತ್ತಿದ್ದು, ಮುಂದಿನ ನಾಲೈದು ತಿಂಗಳಿನಲ್ಲಿ ಬಹಳಷ್ಟು ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

five × one =

 
Back To Top