Sri Ganesh Tel

ಹುತಾತ್ಮರನ್ನು ನೆನೆದ ಪ್ರಧಾನಿ

Posted In : ದೇಶ

ದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಂದು  ಪ್ರಧಾನ ಮಂತ್ರಿ ನರೇಂದ್ರ ಮೋದಿಯೊಂದಿಗೆ ಕೇಂದ್ರ ಸಚಿವಾಲಯದ ಅನೇಕರು ದೇಶ ರಕ್ಷಣೆಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಇದೇ ಸಂದರ್ಭ ದೆಹಲಿಯ ಕೇಂದ್ರೀಯ ಸೈನಿಕ ಮಂಡಳಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇದೇ ಸಂದರ್ಭ ಮಾಜಿ ಸೈನಿಕರು ಹಾಗೂ ಅವರ ಕುಟುಂಬಗಳ ಕಲ್ಯಾಣಕ್ಕಾಗಿ ಸಶಸ್ತ್ರ ಪಡೆಗಳ ನಿಧಿಗೆ ಕೊಡುಗೆ ನೀಡುವಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಜನರಲ್ಲಿ ಕೋರಿದ್ದಾರೆ. ಯೋಧರಿಗೆ ತಮ್ಮ ಧನ್ಯವಾದಗಳನ್ನು ತಿಳಿಸಲೆಂದು ವಿಶೇಷ ಡಿಜಿಟಲ್‌ ಅಭಿಯಾನವನ್ನು ಡಿಸೆಂಬರ್‌ 1ರಿಂದ 7ರ ವರೆಗೆ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಗೃಹ ಸಚಿವ ರಾಜನಾಥ್‌ ಸಿಂಗ್‌ ಕೂಡಾ ಇದೇ ಸಂದರ್ಭ ದೇಶವಾಸಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.

1949ರಿಂದಲೂ ಡಿಸೆಂಬರ್‌ 7ನ್ನು ಸಶಸ್ತ್ರ ಪಡೆಗಳ ಧ್ವಜ   ದಿನಾಚರಣೆಯನ್ನಾಗಿ ಆಚರಿಸುತ್ತಾ ಬರಲಾಗಿದೆ. ಈ ಮೂಲಕ ಭಾರತೀಯ ಸಶಸ್ತ್ರ ಪಡೆಗಳು ಹಾಗೂ ನಾಗರಿಕರ ನಡುವೆ ಮತ್ತಷ್ಟು ಬೆಸುಗೆ ತರುವ ಉದ್ದೇಶ ಹೊಂದಲಾಗಿದೆ. ಪ್ರತಿ ವರ್ಷ ಡಿಸೆಂಬರ್‌ 7ರಂದು ಅಂಗವಿಕಲ, ಪಿಂಚಣಿದಾರ, ವೃದ್ಧ ಸೈನಿಕರು, ಹುತಾತ್ಮ ಯೋಧರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಕೋರಲಾಗುತ್ತದೆ.

 

Leave a Reply

Your email address will not be published. Required fields are marked *

six + 20 =

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

 

Friday, 15.12.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ , ತ್ರಯೋದಶಿ, ಶುಕ್ರವಾರ, ನಿತ್ಯ ನಕ್ಷತ್ರ-ವಿಶಾಖ, ಯೋಗ-ಸುಕರ್ಮ, ಕರಣ-ಗರಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 07.30-09.00 03.00-04.30

Read More

Back To Top