About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

2019ರ ಏರ್ ಇಂಡಿಯಾ ಶೋ ಬೆಂಗಳೂರಿನಲ್ಲೇ, ಕೇಂದ್ರ ತೀರ್ಮಾನ

ದೆಹಲಿ: 2019ರ ಏರೋ ಇಂಡಿಯಾ ಏರ್ ಶೋ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಈ ಮೂಲಕ ಉತ್ತರ ಪ್ರದೇಶದ ಲಕ್ನೋಗೆ ಏರ್ ಶೋ ಸ್ಥಳಾಂತರವಾಗಲಿದೆ ಎನ್ನುವ ಸುದ್ದಿಗೆ ಪೂರ್ಣವಿರಾಮ ಬಿದ್ದಿದೆ.

ಫೈಲ್ ಫೊಟೊ

ಲಕ್ನೋದಲ್ಲಿ ಏರ್ ಶೋ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇಂದ್ರದ ಮೇಲೆ ಒತ್ತಡ ಹಾಕಿದ್ದರು. ಹೀಗಾಗಿ ಕೇಂದ್ರ ಸರಕಾರ ಲಕ್ನೋದಲ್ಲಿ ನಡೆಸಲು ಸಿದ್ಧತೆ ನಡೆಸಿದೆ ಎನ್ನಲಾಗಿತ್ತು. ಇದ್ರಿಂದ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಬೆಂಗಳೂರು ನಗರದಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರಕ್ಷಣಾ ಇಲಾಖೆಯ ಭೂಮಿಯನ್ನು ವರ್ಗಾಯಿಸುವ ಕುರಿತು ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಆಗಸ್ಟ್ 4 ರಂದು ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಏರ್ ಶೋ ನಡೆಸಲು ವಿವಿಧ ರಾಜ್ಯಗಳಿಂದ ಪ್ರಸ್ತಾಪ ಬಂದಿದೆ. ಆದರೆ ಅಂತಿಮವಾಗಿಲ್ಲ ಎಂದು ಪ್ರತಿಕ್ರಿಯಿಸಿದ್ದರು. ಈ ಎಲ್ಲ ಕಾರಣದಿಂದ ಏರ್ ಶೋ ಬೆಂಗಳೂರಿನಲ್ಲಿ ನಡೆಯುತ್ತಾ ಎನ್ನುವ ಅನುಮಾನ ಎದ್ದಿತ್ತು. ಇದೀಗ ಬೆಗಳೂರಿನಲ್ಲೇ ಏರ್ ಶೋ ನಡೆಸುವ ಬಗ್ಗೆ ಕೇಂದ್ರ ತೀರ್ಮಾನ ತೆಗೆದುಕೊಂಡಿದೆ.

Tags

Related Articles

Leave a Reply

Your email address will not be published. Required fields are marked *

Language
Close