lakshmi-electricals

ನಳಂದ ವಿವಿಗೆ 25 ಎಕರೆ ಭೂಮಿ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ನಳಂದ ವಿವಿ ಸ್ಥಾಪನೆಗೆ ಚಾಮರಾಜನಗರದ ಉತ್ತುವಳ್ಳಿ ಗ್ರಾಮದಲ್ಲಿ 25 ಎಕರೆ ಭೂಮಿ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಸಬಾ ಹೋಬಳಿ ಉತ್ತುವಳ್ಳಿ ಗ್ರಾಮದ ಸರ್ವೆ ನಂಬರ್ 117ರಲ್ಲಿ 25 ಎಕರೆ ಗೋಮಾಳ ಭೂಮಿಯನ್ನು ಮಾರ್ಗಸೂಚಿ ದರದ ಶೇ.50ರಷ್ಟು ದರದಲ್ಲಿ ಮಂಜೂರು ಮಾಡಲು ನಿರ್ಧರಿಸಲಾಗಿದೆ. ಇಂಟರ್ ನ್ಯಾಷನಲ್ ಬುದ್ಧಿಸ್ಟ್ ಮಾಂಕ್ಸ್ ಚಾರಿಟೆಬಲ್ ಟ್ರಸ್ಟ್ ನಳಂದ ವಿವಿ ಸ್ಥಾಪಿಸಲಿದೆ ಎಂದರು.

550 ಪಶುವೈದ್ಯಾಧಿಕಾರಿಗಳು, ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ 100 ಬ್ಯಾಕ್ಲಾಗ್ ಹಾಗೂ 450 ವೈದ್ಯಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ, ಉಚಿತ ರೋಗ ಪತ್ತೆ ಕೇಂದ್ರಗಳಿಗೆ 103.53 ಕೋಟಿ ರು.ವೆಚ್ಚದಲ್ಲಿ ಸಿ.ಟಿ ಸ್ಕ್ಯಾನ್, ಎಂ.ಆರ್.ಐ ಸ್ಕ್ಯಾನ್ ಯಂತ್ರ ಖರೀದಿ ಸೇರಿದಂತೆ 33ಕ್ಕೂ ಹೆಚ್ಚು ಯೋಜನೆ, ಕಾರ್ಯಕ್ರಮಗಳಿಗೆ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ಫೆ.6 ರಿಂದ 10ರವರೆಗೆ 5 ದಿನ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದೆ.

ಮೊದಲ ದಿನ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

2 × two =

Loading

ಒತ್ತುವರಿ ತೆರವಿನಿಂದ ಬೆಂಗಳೂರಿನ ನೆರೆ ಸಮಸ್ಯೆೆ ಪರಿಹಾರವಾಗಬಲ್ಲದೇ?

Thank you for voting
You have already voted on this poll!
Please select an option!

vishwavani-timely-3

Sunday, 26.03.2017

ಶ್ರೀ ದುರ್ಮುಖ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ತಿಥಿ: ತ್ರಯೋದಶಿ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಶುಭ, ಕರಣ: ವಣಿಜೆ

ರಾಹುಕಾಲಗುಳಿಕಕಾಲಯಮಗಂಡಕಾಲ
04.30-06.00 03.00-04.30 12.00-01.30

Read More

 

Sunday, 26.03.2017

ಶ್ರೀ ದುರ್ಮುಖ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ತಿಥಿ: ತ್ರಯೋದಶಿ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಶುಭ, ಕರಣ: ವಣಿಜೆ

ರಾಹುಕಾಲಗುಳಿಕಕಾಲಯಮಗಂಡಕಾಲ
04.30-06.00 03.00-04.30 12.00-01.30

Read More

Back To Top