About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಆಪರೇಷನ್ ಕಮಲ ಮಾಡಿದರೆ ಆಪರೇಷನ್ ಹಸ್ತ ಮಾಡುತ್ತೇವೆ: ಗೋಪಾಲಕೃಷ್ಣ

ಬೆಂಗಳೂರು: ಬಿಜೆಪಿಯವರು ಸರಕಾರ ಉರುಳಿಸಲು ಆಪರೇಷನ್ ಕಮಲ ಮಾಡಿದರೆ, ನಾವು ಆಪರೇಷನ್ ಹಸ್ತ ಮಾಡಬೇಕಾಗುತ್ತದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಡಿಸೆಂಬರ್‌ನಲ್ಲಿ ಧಮಾಕಾ ಆಗಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಉರುಳಿಸಲು ಬಿಜೆಪಿ ಮುಂದಾದರೆ, ನಾವೂ ಆಪರೇಷನ್ ಹಸ್ತ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಲೋಕಸಭೆ ಮತ್ತು ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಸೋತು ಸುಣ್ಣವಾಗಿದೆ. ಹೀಗಾದರೂ ಅವರಿಗೆ ಬುದ್ಧಿ ಬಂದಿಲ್ಲ. ಆಪರೇಷನ್ ಕಮಲ ನಡೆಯುವುದಿಲ್ಲ. ಯಾವ ಶಾಸಕರೂ ರಾಜೀನಾಮೆ ಕೊಟ್ಟು ಪುನಃ ಚುನಾವಣೆಗೆ ಸ್ಪರ್ಧಿಸಲು ಬಯಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಕೈಸುಟ್ಟುಕೊಂಡಿರುವ ಬಿಎಸ್‌ವೈ
ಮಾಜಿ ಸಿಎಂ ಯಡಿಯೂರಪ್ಪ ಅವರು ಸರಕಾರ ರಚಿಸಲು ಹೋಗಿ ಕೈಸುಟ್ಟುಕೊಂಡಿದ್ದರೂ ಇನ್ನೂ ಬುದ್ಧಿ ಕಲಿತಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಕೇರಳಕ್ಕೆ ಹೋಗುತ್ತಾರೆ ಎಂದು ಆರೋಪಿಸುವ ಯಡಿಯೂರಪ್ಪ ಅವರೇ ಈಗ ಕೇರಳಕ್ಕೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು.

Tags

Related Articles

Leave a Reply

Your email address will not be published. Required fields are marked *

Language
Close