About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ತನ್ವೀರ್ ಸೇಠ್

ಮೈಸೂರು: ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಿದ್ದೇನೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರವಿದೆ. ಮೊದಲು ಪ್ರಾಂತ್ಯವಾರು ಪ್ರಾತಿನಿಧ್ಯ ಇಲ್ಲದ ಕಡೆಗಳಿಗೆ ಅವಕಾಶ ಮಾಡಿಕೊಡಲಾಗಿತ್ತು. ಈಗ ಎಲ್ಲರಿಗೂ ಅವಕಾಶ ಮಾಡಿಕೊಡಲು ಮುಖಂಡರು ನಿರ್ಧರಿಸಿದ್ದಾರೆ ಎಂದರು.

ಪಕ್ಷದಲ್ಲಿ ನಾನೊಬ್ಬ ಹಿರಿಯ ಶಾಸಕ. ಕಾಂಗ್ರೆಸ್‌ನಿಂದ ಈ ಭಾಗಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ. ಎಲ್ಲವನ್ನು ನಾಯಕರು ಗಮನಿಸಿ ಸೂಕ್ತ ನಿರ್ಧಾರ ಮಾಡಲಿದ್ದಾರೆ. ನಾನು ಸಚಿವನಾಗಿ ಇಲ್ಲದಿದ್ದರೂ ಕ್ಷೇತ್ರದಲ್ಲಿ ಸಚಿವನಂತೆ ಕೆಲಸ ಮಾಡಿದ್ದೇನೆ. ಅಧಿಕಾರಕ್ಕಾಗಿ ಹಪಹಪಿಸಿಲ್ಲ. ವಿಸ್ತರಣೆ ದಿನದಂದು ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close