About Us Advertise with us Be a Reporter E-Paper

Breaking Newsದೇಶಪ್ರಚಲಿತ

ಲೈಂಗಿಕ ದೌರ್ಜನ್ಯ ಅತ್ಯಾಚಾರಕ್ಕೊಳಗಾದವರ ಗುರುತು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ಸುಪ್ರೀಂ ನಿಷೇಧ

ದೆಹಲಿ: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೊಳಗಾದ ಸಂಸತ್ತರ ಗುರುತನ್ನು ಮಾಧ್ಯಮಗಳು ಮತ್ತು ಪೊಲೀಸರು ಬಹಿರಂಗಪಡಿಸಬಾರದು ಎಂದು ಮಾಧ್ಯಮಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ. ಒಂದು ವೇಳೆ ಸಂತ್ರಸ್ತೆ ಮೃತಪಟ್ಟಿದ್ದರೂ ಕೂಡ ಅವರ ಗುರುತನ್ನು ಸಾರ್ವಜನಿಕವಾಗಿ ಪ್ರಕಟಿಸುವಂತ್ತಿಲ್ಲ ಎಂದು ಸುಪ್ರೀಂ ನಿಷೇಧ ಹೇರಿದೆ.

ನಾಯಮೂರ್ತಿ ಮದನ್ ಬಿ. ಲೋಕೂರ್ ಅವರಿದ್ದ ಪೀಠ ಈ ಕುರಿತು ಆದೇಶ ನೀಡಿದ್ದು, ಸುದ್ದಿ ಪತ್ರಿಕೆಗಳು, ದೃಶ್ಯಮಾಧ್ಯಮಗಳು ಅಥವಾ ಸಾಮಾಜಿಕ ಜಾಲತಾಣಗಳಲೇ ಆಗಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಕ್ಕೊಳಗಾದವರ ಹೆಸರು ಹಾಗೂ ಗುರುತನ್ನು ಬಹಿರಂಗಪಡಿಸಬಾರದು ಎಂದು ತಿಳಿಸಿದೆ.

ಪಾಲಕರ ಒಪ್ಪಿಗೆಯಿದ್ದರೂ ಕೂಡ ಪೊಲೀಸರು ಅಥವಾ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳೂ ಅತ್ಯಾಚಾರ ಸಂತ್ರಸ್ತೆಯ ಹೆಸರನ್ನು ಬಹಿರಂಗಪಡಿಸುವಂತಿಲ್ಲ. ಅಲ್ಲದೆ, ಲೈಂಗಿಕ ದೌರ್ಜನ್ಯ ಪ್ರಕರಣಗಳ ಎಫ್‌ಐಆರ್‌ಗಳನ್ನು ವಿಶೇಷವಾಗಿ ಅಪ್ರಾಪ್ತರು ಒಳಗೊಂಡಿರುವ ಪ್ರಕರಣಗಳ ವಿವರವನ್ನು ಸಾರ್ವಜನಿಕಗೊಳಿಸಬಾರದು ಹಾಗೂ ಅತ್ಯಾಚಾರದ ಬಳಿಕ ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗುವ ಸಂತ್ರಸ್ತರ ಕುರಿತು ಕಳವಳ ವ್ಯಕ್ತಪಡಿಸಿರುವ ಕೋರ್ಟ್ ಅಚ್ಯಾಚಾರದಿಂದ ಬದುಕುಳಿದವರನ್ನು ಸಾಮಾಜದಲ್ಲಿ ಅಸ್ವಷ್ಯರಂತೆ ಪರಿಗಣಿಸುವುದು ದುರದೃಷ್ಟಕರ ಎಂದು ನ್ಯಾಯಾಲಯ ತಿಳಿಸಿದೆ.

ಸುಪ್ರೀಂ ಕೋರ್ಟ್‌ನಿಂದ ಹೊರಡಿಸಲಾದ ಮಾರ್ಗದರ್ಶಿ ಸೂತ್ರಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅಳವಡಿಸಿಕೊಳ್ಳಬೇಕು. ಅತ್ಯಾಚಾರ ಸಂತ್ರಸ್ತರಿಗೆ ಕೌನ್ಸೆಲಿಂಗ್ ಮತ್ತು ಪುನರ್ವಸತಿ ಕಲ್ಪಿಸಲು ಒಂದು ವರ್ಷದೊಳಗಾಗಿ ಪ್ರತಿ ಜಿಲ್ಲೆಯಲ್ಲಿಯೂ ಒನ್ ಸ್ಟಾಪ್ ಕೇಂದ್ರ ಗಳನ್ನು ಸ್ಥಾಪಿಸುವುದೂ ಸೇರಿದಂತೆ ಇತರೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.

Tags

Related Articles

Leave a Reply

Your email address will not be published. Required fields are marked *

Language
Close