About Us Advertise with us Be a Reporter E-Paper

Breaking Newsದೇಶಪ್ರಚಲಿತ

ಸಂಸತ್‌ನಲ್ಲಿ ಗದ್ದಲ: ಕಲಾಪ ಮುಂದೂಡಿಕೆ

ದೆಹಲಿ: ರಫೇಲ್ ಹಗರಣ, ರಾಮ ಮಂದಿರ ನಿರ್ಮಾಣ, ಮೇಕೆದಾಟು ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ್ದರಿಂದ ಸಂಸತ್‌ನ ಉಭಯ ಸದನಗಳನ್ನು ನಾಳೆಗೆ ಮುಂದೂಡಲಾಯಿತು.

ಅಗಲಿದ ನಾಯಕರಿಗೆ ಸಂತಾಪ ಸೂಚಿಸಿದ ನಂತರ ಪ್ರಶ್ನೋತ್ತರವನ್ನು ಕೈಗೆತ್ತಿಕೊಳ್ಳುತ್ತಿದ್ದಂತೆ, ಕಾಂಗ್ರೆಸ್, ಶಿವಸೇನೆ, ಟಿಡಿಪಿ ಮತ್ತು ಎಐಎಡಿಎಂಕೆ ಸದಸ್ಯರು ಬಾವಿಯೊಳಗೆ ನುಗ್ಗಿ, ಭಿತ್ತಿಪತ್ರಗಳನ್ನು ಹಿಡಿದು ತಮ್ಮ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ರಫೇಲ್ ಹಗರಣವನ್ನು ಜಂಟಿ ಸದನ ಸಮಿತಿಗೆ ಒಪ್ಪಿಸುವಂತೆ ಕಾಂಗ್ರೆಸ್ ಒತ್ತಾಯಿಸಿದರೆ ಅಯೋಧ್ಯೆೆಯಲ್ಲಿ ರಾಮ ಮಂದಿರವನ್ನು ನಿರ್ಮಾಣವನ್ನು ಕೂಡಲೆ ಆರಂಭಿಸುವಂತೆ ಧರಣಿ ರಂಭಿಸಿದರು.

ಕಾವೇರಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ತಮಿಳುನಾಡಿನ ರೈತರಿಗೆ ನ್ಯಾಯ ಒದಗಿಸುವಂತೆ ಎಐಎಡಿಎಂಕೆ ಮತ್ತು ವಿಶಾಖಪಟ್ಟಣಕ್ಕೆ ರೈಲ್ವೇ ವಲಯವನ್ನು ಮಂಜೂರು ಮಾಡುವಂತೆ ಧರಣಿ ಆರಂಭಿಸಿದರು. ಲೋಕಸಭೆ ಸಭಾಪತಿ ಸುಮಿತ್ರಾ ಮಹಾಜನ್ ಅವರ ಮನವಿಯ ನಡುವೆಯೂ ಧರಣಿ ಘೋಷಣೆಗಳನ್ನು ಕೂಗುವುದನ್ನು ಮುಂದುವರಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ರಾಜ್ಯಸಭೆಯಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿ ಸದನವನ್ನು ಮುಂದೂಡಲಾಯಿತು.

Tags

Related Articles

Leave a Reply

Your email address will not be published. Required fields are marked *

Language
Close