About Us Advertise with us Be a Reporter E-Paper

Breaking Newsದೇಶಪ್ರಚಲಿತ

ಲೋಕಸಭೆಯಲ್ಲಿ ತ್ರಿವಳಿ ತಲಾಖ್‌‌ ಮಂಡನೆ

ದೆಹಲಿ: ತ್ರಿವಳಿ ತಲಾಖ್ ಮಸೂದೆ ಅಥವಾ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆಯನ್ನು ಡಿ.17 ರಂದು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಇದನ್ನು ಇನ್‌ಸ್ಟಂಟ್ ತಲಾಖ್ ಬಿಲ್ ಎಂದೇ ಕರೆಯಲಾಗುತ್ತದೆ.

2019 ರ ಸಂಸತ್ ಚುನಾವಣೆಗೂ ಮುನ್ನ ಸಂಸತ್‌ನಲ್ಲಿ ಮಸೂದೆಗೆ ಅಂಗೀಕಾರ ಪಡೆಯುವ ಉದ್ದೇಶ ಹೊಂದಿರುವ ಸರಕಾರ ಕಳೆದ ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕರಿಸಲು ವಿಫಲವಾಗಿತ್ತು. ಈ ಬಳಿಕ ಸೆ.19 ರಂದು ತ್ರಿವಳಿ ತಲಾಖ್‌ನ್ನು ಕ್ರಿಮಿನಲ್ ಅಪರಾಧಗೊಳಿಸಿ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು.

ಮುಂಗಾರು ಅಧಿವೇಶನದಲ್ಲಿ ಲೋಕಸಭೆಯಲ್ಲಿ 21 ಮಸೂದೆಗಳನ್ನು ಅಂಗೀಕರಿಸಲಾಗಿದ್ದು, ರಾಜ್ಯಸಭೆಯಲ್ಲಿ 14 ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಆದರೆ ತ್ರಿವಳಿ ತಲಾಖ್ ಮಸೂದೆ ಅಂಗೀಕಾರ ಮಾತ್ರ ವಿಫಲವಾಗಿತ್ತು. ಈ ನಡುವೆ ತಲಾಖ್ ವಿಧೇಯಕವನ್ನು ಸಂಸದ ಶಶಿ ತರೂರ್ ವಿರೋಧಿಸಿದ್ದು, ರಾಜಕೀಯ ಲಾಭಕ್ಕಾಗಿ ಕೇಂದ್ರ ಸರಕಾರ ಈ ವಿಧೇಯಕ ಮಂಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಡಿಸೆಂಬರ್ 11 ರಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನ ಮುಂದಿನ ವರ್ಷದ ಜನವರಿ 8 ರವರೆಗೆ ನಡೆಯಲಿದೆ. ಐದು ರಾಜ್ಯಗಳ ಚುನಾವಣೆ ಹಿನ್ನೆೆಲೆಯಲ್ಲಿ ಚಳಿಗಾಲದ ಅಧಿವೇಶನ ತಡವಾಗಿ ಆರಭವಾಗಿತ್ತು.

Tags

Related Articles

Leave a Reply

Your email address will not be published. Required fields are marked *

Language
Close