About Us Advertise with us Be a Reporter E-Paper

Breaking Newsದೇಶಪ್ರಚಲಿತ

ಮಹಾಘಟಬಂಧನಕ್ಕೆ ಕೈಕೊಟ್ಟ ನವೀನ್ ಪಟ್ನಾಯಕ್: ಕಾಂಗ್ರೆಸ್‌ಗೆ ಹಿನ್ನಡೆ

ದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವ ಉದ್ದೇಶದಿಂದ ವಿರೋಧ ಪಕ್ಷಗಳು ಒಟ್ಟಾಗಿ ರಚಿಸಿರುವ  ಮಹಾಘಟಬಂಧನಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ಬಿಜು ಜನತಾ ದಳ(ಬಿಜೆಡಿ) ಆಧ್ಯಕ್ಷ ನವೀನ್ ಪಟ್ನಾಯಕ್ ಹೇಳಿದ್ದಾರೆ.

ದೆಹಲಿಯಲ್ಲಿ ಬುಧವಾರ ಬಿಜೆಡಿ ಹಮ್ಮಿಕೊಂಡಿದ್ದ ರೈತರ ಸಮಾವೇಶದಲ್ಲಿ ಭಾವವಹಿಸಿ ಮಾತನಾಡಿದ ಅವರು ಮಹಾಗಠಬಂಧನ ಸೇರುವ ಕುರಿತು ನಿರ್ಧಾರ ತೆಗೆದುಕೊಳ್ಳಲು ತಮಗೆ ಇನ್ನಷ್ಟು ಕಾಲಾವಕಾಶ ಬೇಕು ಎಂದರು. ಹೀಗೆ ಹೇಳಿದ 24 ಗಂಟೆಗಳಲ್ಲೇ ನವೀನ್ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, ನಮ್ಮ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸಮಾನ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದೆ ಆದರಿಂದ ನಾವು ಮಹಾಘಟಬಂಧನ್‌ದಲ್ಲಿ ಭಾಗವಾಗುವುದಿಲ್ಲ,ಎಂದು ಭವನೇಶ್ವರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿ ಫೆಡರಲ್ ಫ್ರಂಟ್ ರಚನೆ ಸಂಬಂಧ ವಿವಿಧ ಪ್ರಾದೇಶಿಕ ಪಕ್ಷಗಳ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ನವೀನ್ ಪಟ್ನಾಯಕ್ ನಿರ್ಧಾರ ಕುತೂಹಲವನ್ನು ಹುಟ್ಟುಹಾಕಿದೆ.

Tags

Related Articles

Leave a Reply

Your email address will not be published. Required fields are marked *

Language
Close