About Us Advertise with us Be a Reporter E-Paper

Breaking Newsದೇಶಪ್ರಚಲಿತ

ಅಲೋಕ್ ವರ್ಮಾರನ್ನು ವಜಾಗೊಳಿಸಲು ಪ್ರಧಾನಿ ಆತುರದಲ್ಲಿದ್ದಾರೆ: ರಾಹುಲ್‌ ಗಾಂಧಿ

ದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರನ್ನು ವಜಾಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಆತುರ ಹೊಂದಿದ್ದಾರೆ ಎಂದು ಕಾಂಗ್ರೆೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ ಕೇಂದ್ರ ಸರಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿತ್ತು. ವರ್ಮಾ ಅವರು ತಮ್ಮ ಕಚೇರಿ ಪ್ರವೇಶಿಸಬಹುದು, ಆದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ನ್ಯಾಯಾಲಯ ಸೂಚಿಸಿತ್ತು.

ರಫೇಲ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಅವರನ್ನು ಯಾರೊಬ್ಬರೂ ರಕ್ಷಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗುಡುಗಿದ್ದರು. ಇದೀಗ ಗುರುವಾರ ಟ್ವಿಟ್ಟರ್ ಮೂಲಕ ಎರಡು ಪ್ರಶ್ನೆೆಗಳನ್ನು ಕೇಳಿರುವ ರಾಹುಲ್ ಮೋದಿ ಕುರಿತು ವ್ಯಂಗ್ಯವಾಡಿದ್ದಾರೆ.

ರಾಹುಲ್ ಪ್ರಶ್ನೆೆಗಳು
1. ಸಿಬಿಐ ಮುಖ್ಯಸ್ಥರನ್ನು ವಜಾಗೊಳಿಸಲು ಪ್ರಧಾನಿಗಳಿಗೆ ಆತುರ ಏಕೆ?
2. ಆಯ್ಕೆ ಸಮಿತಿ ಮುಂದೆ ತಮ್ಮ ವಾದವನ್ನು ಮಂಡಿಸಲು ಸಿಬಿಐ ಮುಖ್ಯಸ್ಥರಿಗೆ ಏಕೆ ಅವಕಾಶ ನೀಡುತ್ತಿಲ್ಲ ?
ಉತ್ತರ: ರಫೇಲ್

Tags

Related Articles

Leave a Reply

Your email address will not be published. Required fields are marked *

Language
Close