About Us Advertise with us Be a Reporter E-Paper

Breaking Newsದೇಶಪ್ರಚಲಿತ

ಯಾವುದೇ ಕಾರಣಕ್ಕೂ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ: ಎಂ.ಕೆ. ಸ್ಟಾಲಿನ್

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಏನು ವಾಜಪೇಯಿ ಅಲ್ಲ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆ ವೇಳೆ ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಡಿಎಂಕೆ ಪಕ್ಷ ಮೈತ್ರಿ ಮಾಡಿಕೊಳ್ಳುವುದಿಲ್ಲ ಪಕ್ಷದ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ವಾಜಪೇಯಿ ಅಲ್ಲ ಅವರಿಗೂ ವಾಜಪೇಯಿ ಅವರಿಗೂ ಬಹಳ ವ್ಯತ್ಯಾಸವಿದೆ. ಮಾಜಿ ಪ್ರಧಾನಿಯನ್ನು ಮೋದಿ ಜತೆ ಹೋಲಿಸುವುದು ದೊಡ್ಡ ವ್ಯಂಗ್ಯ. ಬಿಜೆಪಿ ಜತೆ ಯಾರೇ ಸಹವಾಸ ಬೆಳೆಸಿದರು ಅದು ಅವರ ಪಾಲಿಗೆ ಆರೋಗ್ಯಕರ ಬೆಳವಣಿಗೆ ಅಲ್ಲ ಎಂದು ಸ್ಟಾಲಿನ್ ಟೀಕಿಸಿದ್ದಾರೆ.

ಮೋದಿ ಸರಕಾರದ ನಾಲ್ಕು ವರ್ಷದ ಆಡಳಿತ ಅವಧಿಯಲ್ಲಿ ಬಿಜೆಪಿ ಸಾಮಾಜಿಕ ನ್ಯಾಯ, ಜಾತ್ಯಾತೀತ ವ್ಯವಸ್ಥೆ ಬುಡಮೇಲು ಮಾಡಿ. ತಮಿಳುನಾಡು ರಾಜ್ಯಕ್ಕೆ ಅಭಿವೃದ್ಧಿ ವಿಷಯದಲ್ಲಿ ಸಾಕಷ್ಟು ಅನ್ಯಾಯವಾಗಿದೆ, ಇದರಿಂದ ತಮಿಳರ ಭಾವನೆಗಳಿಗೆ ಧಕ್ಕೆಯಾಗಿದೆ. ಡಿಎಂಕೆ ಪ್ರಾದೇಶಿಕ ಪಕ್ಷವಾಗಿ ಉಳಿಯಲಿದೆ ಎಂದಿರುವ ಸ್ಟಾಲಿನ್, ಬಿಜೆಪಿ ಹೊರತುಪಡಿಸಿ ಬೇರೆ ರಾಷ್ಟ್ರೀಯ ಪಕ್ಷಗಳು ಬಯಸಿದರೆ ಅದರೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚಿಂತಿಸಲಾಗುವುದು ಎಂದಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close