About Us Advertise with us Be a Reporter E-Paper

Breaking Newsದೇಶಪ್ರಚಲಿತ

ರಾಜ್ ಠಾಕ್ರೆ ಮಗನ ಮದುವೆ: ರಾಹುಲ್‌ಗೆ ಸಿಕ್ಕ ಆಹ್ವಾನ ಪ್ರಧಾನಿ ಮೋದಿಗಿಲ್ಲ

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ತಮ್ಮ ಮಗನ ಮದುವೆಗೆ ರಾಹುಲ್ ಗಾಂಧಿ, ಶರದ್ ಪವಾರ್, ಸುಶೀಲ್ ಕುಮಾರ್ ಶಿಂಧೆ ಸೇರಿದಂತೆ ಹಲವು ಹಿರಿಯ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿಲ್ಲ ಎಂದು ವರದಿಗಳು ಬಂದಿವೆ.

ಲೋಕಸಭಾ ಚುನಾವಣೆಯಲ್ಲಿ ಎನ್‌ಸಿಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ ತಮ್ಮ ಮಗನ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಹ್ವಾನ ನೀಡಿಲ್ಲ. ಇತ್ತೀಚೆಗಷ್ಟೇ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದ ರಾಜ್ ಠಾಕ್ರೆ ಅವರ ಕುಟುಂಬದವರನ್ನು ಮದುವೆಗೆ ಆಹ್ವಾನಿಸಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಬಿಜೆಪಿ ನಾಯಕ ನಿತಿನ್ ಗಡ್ಕರಿ ಅವರಿಗೂ ಆಹ್ವಾನ ನೀಡಲಾಗಿತ್ತು. ಈ ಮಧ್ಯೆೆ ವಿವಾಹ ಆಹ್ವಾನಿತರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೇ ಇಲ್ಲ ಎಂಬ ಮಾಹಿತಿಯೂ ಬಂದಿದೆ.

Tags

Related Articles

Leave a Reply

Your email address will not be published. Required fields are marked *

Language
Close