About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಕೆ: ದೇವೇಗೌಡ

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆೆಸ್-ಜೆಡಿಎಸ್ ಮೈತ್ರಿ ಮುಂದುವರಿಯಲಿದ್ದು, ಸೀಟು ಹಂಚಿಕೆ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ನಮ್ಮದು ಸಣ್ಣ ಪಕ್ಷ. ನಮಗೆ ಎಷ್ಟು ಸೀಟು ಕೊಡುತ್ತಾರೋ ಗೊತ್ತಿಲ್ಲ. ಈ ಕುರಿತು ಇನ್ನೂ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅಂತಿಮ ತೀರ್ಮಾನ ಹೊರ ಬೀಳಲಿದೆ ಎಂದರು.

ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್‌ಗೆ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರೇ ಜೆಡಿಎಸ್ ಗೆ 10 ಸ್ಥಾನ ಬಿಟ್ಟುಕೊಡಬೇಕು ಎಂದಿದ್ದಾರೆ ಎಂದರು. ನೀವು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೀರಿ ಎಂಬ ಪ್ರಶ್ನೆಗೆ ಆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಹೇಳುವ ಮೂಲಕ ಸ್ಪರ್ಧೆ ಕುತೂಹಲವನ್ನು ಮತ್ತೆ ಕಾಯ್ದಿರಿಸಿದರು.

ಇದೇ ವೇಳೆ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿಯವರಿಗೆ ಕೇಂದ್ರ ಸರಕಾರ ನೀಡಿರುವ ಶೇ.10 ರಷ್ಟು ಮೀಸಲು ಕುರಿತು ಪ್ರತಿಕ್ರಿಯಿಸಿದ ಗೌಡರು, ಇತ್ತೀಚೆಗೆ ಕೇಂದ್ರ ಸರಕಾರದ ಜನಪ್ರಿಯತೆ ಕುಗ್ಗಿದೆ ಎಂಬುದಕ್ಕೆ ನಡೆದ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸಾಕ್ಷಿ. ಮುಂದಿನ ಚುನಾವಣೆಯಲ್ಲಿ ಮೇಲ್ವರ್ಗದ ಜನರನ್ನು ಓಲೈಸಿ, ಶತಾಯಗತಾಯ ಚುನಾವಣೆಯಲ್ಲಿ ಗೆಲ್ಲಲು ಮೀಸಲು ಅಸ್ತ್ರ ಬಳಸಿದ್ದಾರೆ ಎಂದು ನಸುನಕ್ಕರು.

Tags

Related Articles

Leave a Reply

Your email address will not be published. Required fields are marked *

Language
Close