About Us Advertise with us Be a Reporter E-Paper

Breaking Newsದೇಶಪ್ರಚಲಿತ

ಸಿಬಿಐ ತನಿಖೆ ಒಪ್ಪಿಗೆ ಹಿಂಪಡೆದ ಛತ್ತೀಸ್‌ಗಡ

ದೆಹಲಿ: ಕಳೆದ ತಿಂಗಳಷ್ಟೇ ಆಂಧ್ರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ತನ್ನ ವ್ಯಾಪ್ತಿಯಲ್ಲಿ ಬರುವ ಪ್ರಕರಣಗಳ ತನಿಖೆ ನಡೆಸಲು ಸಿಬಿಐಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆದಿದ್ದವು. ಈಗ ಛತ್ತೀಸ್‌ಗಡ ಕೂಡ ಇದೇ ಹಾದಿ ತುಳಿದಿದೆ.

ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಭಗೇಲ್ ಅವರು ಈ ನಿರ್ಧಾರದ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಹಾಗೂ ಆಂತರಿಕ ಸಚಿವಾಲಯಕ್ಕೆ ಪತ್ರ ಬರೆದು, ‘ಸಿಬಿಐ ತಮ್ಮ ರಾಜ್ಯದಲ್ಲಿ ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸದಂತೆ ನಿರ್ದೇಶಿಸಬೇಕು’ ಎಂದು ಕೋರಿದ್ದಾರೆ. ಛತ್ತೀಸ್‌ಗಡ ರಾಜ್ಯ ಸರಕಾರದ ಈ ನಿರ್ಧಾರದಿಂದಾಗಿ ಇನ್ನು ಮುಂದೆ ಸಿಬಿಐ, ರಾಜ್ಯದಲ್ಲಿ ತನಿಖೆ ಮತ್ತು ದಾಳಿ ನಡೆಸುವುದಿದ್ದರೆ ಮೊದಲು ರಾಜ್ಯ ಸರಕಾರದ ಅನುಮತಿ ಪಡೆಯಬೇಕು.

Tags

Related Articles

Leave a Reply

Your email address will not be published. Required fields are marked *

Language
Close