About Us Advertise with us Be a Reporter E-Paper

Breaking Newsದೇಶಪ್ರಚಲಿತ

ಸಿಖ್ ನರಮೇಧ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಅಬುದಾಬಿ: 1984ರ ಸಿಖ್ ಹತ್ಯಾಕಾಂಡ ಪ್ರಕರಣದಲ್ಲಿ ಅಪರಾಧಿ ಯಾರೇ ಆದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಯುಎಇ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅಲ್ಲಿನ ಗಲ್ಫ್ ನ್ಯೂಸ್ ಸುದ್ದಿವಾಹಿನಿಗೆ ಸಂದರ್ಶನ ನೀಡಿದ್ದು, ಇದೇ ಮೊದಲ ಬಾರಿಗೆ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ‘1984ರ ಸಿಖ್ ಹತ್ಯಾಕಾಂಡದಲ್ಲಿ ಪಾಲ್ಗೊಂಡವರು ಯಾರೇ ಆಗಿರಲಿ, ಯಾವ ಪಕ್ಷಕ್ಕೇ ಸೇರಿರಲಿ ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಅಲ್ಪ ಸಂಖ್ಯಾತರನ್ನು ತುಳಿದು ಮೇಲೆ ಬರಬಲ್ಲೆವು ಎಂಬ ಆಲೋಚನೆ ಹೊಂದಿರುವವರನ್ನು ಕ್ಷಮಿಸಲು ಅಸಾಧ್ಯ.

ಒಂದು ವೇಳೆ ಯಾರಾದರೂ ಅಲ್ಪ ಸಂಖ್ಯಾತರಿದೆ ತೊಂದರೆ ನೀಡಿದ್ದರೆ ಅವರಿಗೆ ಖಂಡಿತಾ ಶಿಕ್ಷೆಯಾಗಬೇಕು. ಭಾರತದ ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಿದ್ದು ಇಂತಹ ಸೂಕ್ಷ್ಮ ಪ್ರಕರಣಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಮತ್ತು ಸಿಖ್ ಸಮುದಾಯದ ಸಂತ್ರಸ್ಥರಿಗೆ ನ್ಯಾಯ ಒದಗಿಸುತ್ತದೆ ಎಂದು ಹೇಳಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close