About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಮೋದಿ ಸಿಎಂಗೆ ಕ್ಲರ್ಕ್ ಎಂದದಕ್ಕೆ ಕಾಶಂಪೂರ, ಹೊರಟ್ಟಿ ಗರಂ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳಿಗೆ ಯಾವ ಉದ್ದೇಶದಿಂದ ಕ್ಲರ್ಕ್ ಎಂದು ಕರೆದಿದ್ದಾರೆ ಗೊತ್ತಿಲ್ಲ. ರಾಜ್ಯದ ಬಿಜೆಪಿ ಮುಖಂಡರು ಪ್ರಧಾನಿಗೆ ತಪ್ಪು ಮಾಹಿತಿ ನೀಡಿದ್ದರಿಂದ ಈ ರೀತಿ ಹೇಳಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಬಂಡೆಪ್ಪ ಕಾಶಂಪೂರ ಹೇಳಿದ್ದಾರೆ.

ಭಾನುವಾರ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಮ್ಮಿಶ್ರ ಸರಕಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಳ್ಳೆಯ ರೀತಿಯಿಂದ ನಡೆಸಿಕೊಂಡು ಹೋಗುತ್ತಿದ್ದಾರೆ. ಆದರೆ ಪ್ರಧಾನಿ ಅವರು ಯಾಕೆ ಹಾಗೆ ಮಾತನಾಡಿದ್ದಾರೋ ಗೊತ್ತಾಗುತ್ತಿಲ್ಲ. ಸಮ್ಮಿಶ್ರ ಸರಕಾರ ಆ್ಯಕ್ಟಿವ್ ಆಗಿ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಸರಕಾರ ಪತನವಾಗುವುದಿಲ್ಲ. ಬಿಜೆಪಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ ಬೀಳುತ್ತದೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ಐದು ವರ್ಷ ಪೂರ್ಣ ಪ್ರಮಾಣದ ಸಮ್ಮಿಶ್ರ ಸರಕಾರ ಆಡಳಿತ ನಡೆಸಲಿದೆ ಎಂದರು.

ಹೊರಟ್ಟಿ ಕಿಡಿ
ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕ್ಲರ್ಕ್ ಅಂತ ಮಾತನಾಡುವುದು ಸರಿಯಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಮಾತನಾಡಿ, ಈ ಹಿಂದೆ ಬಿಜೆಪಿ-ಜೆಡಿಎಸ್ ಸರಕಾರ ಇದ್ದಾಗ ಹಲವು ಬಿಕ್ಕಟ್ಟುಗಳಿದ್ದವು. ಆಗಿನ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು. ಆಗ ನಾನೇ 14 ಬಾರಿ ಬಿಎಸ್‌ವೈ ಮನೆಗೆ ಹೋಗಿ ಬಗೆಹರಿಸಿದ್ದೇನೆ. ಸಮ್ಮಿಶ್ರ ಸರಕಾರದಲ್ಲಿ ಇಂತಹವು ಸಾಮಾನ್ಯವಾಗಿರುತ್ತವೆ ಎಂದರು.

Tags

Related Articles

Leave a Reply

Your email address will not be published. Required fields are marked *

Language
Close