About Us Advertise with us Be a Reporter E-Paper

Breaking Newsದೇಶಪ್ರಚಲಿತ

ಮುಂಬೈನಲ್ಲಿ ಬಸ್‌ ಮುಷ್ಕರ: ಪ್ರಯಾಣೀಕರ ಪರದಾಟ

ಮುಂಬೈ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೃಹತ್ ಮುಂಬೈ ಸಾರ್ವಜನಿಕ ಸಾರಿಗೆ ಸಂಸ್ಥೆ (ಬೆಸ್ಟ್‌) ನೌಕರರು ನಡೆಸುತ್ತಿರುವ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ.

ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಅಂಡರ್ಟೇಕಿಂಗ್ (ಬಿಇಎಸ್‌ಟಿ) ಸಂಸ್ಥೆಯಲ್ಲಿ 32 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಥೆಯ ಮುಂಗಡಪತ್ರವನ್ನು ಬಿಎಂಸಿ (ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್)ನೊಂದಿಗೆ ವಿಲೀನಗೊಳಿಸುವುದು, ವೇತನ ಹೆಚ್ಚಳ ಸೇರಿದಂತೆ ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸುತ್ತಿದ್ದಾರೆ. ಇದರ ಪರಿಣಾಮ ಸೋಮವಾರವೂ ಸುಮಾರು 3200 ಬಸ್‌ಗಳು ರಸ್ತೆಗಿಳಿದಿಲ್ಲ.

ಸತತ ಒಂದು ವಾರದಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಂಸ್ಥೆಯಲ್ಲಿ 2,610 ಚಾಲಕರು ಮತ್ತು 2,764 ನಿರ್ವಾಹಕರು ಕಾರ್ಯನಿರ್ವಹಿಸುತ್ತಿದ್ದಾರೆ. ಭಾನುವಾರ ಕೇವಲ ನಾಲ್ವರು ಚಾಲಕರು ಮಾತ್ರ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಒಂದೇ ಒಂದು ಬಸ್ ಕೂಡ ರಸ್ತೆಗಿಳಿಯಲಿಲ್ಲ. ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಾಗಿದ್ದ ಬೆಸ್ಟ್‌ ಆಡಳಿತ ಮಂಡಳಿ, ಹೈಕೋರ್ಟ್ ಮೊರೆ ಹೋಗಿತ್ತು.

ವಿಚಾರಣೆ ನಡೆಸಿದ ಕೋರ್ಟ್, ಮುಷ್ಕರವನ್ನು ನಿರ್ಬಂಧಿಸಿ, ಒಕ್ಕೂಟದ ಕಾರ್ಯಕರ್ತರೊಂದಿಗೆ ಸಭೆ ನಡೆಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತ್ತು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆ ಆಯುಕ್ತ, ಬೆಸ್ಟ್‌‌ನ ಪ್ರಧಾನ ವ್ಯವಸ್ಥಾಪಕರು, ಒಕ್ಕೂಟದ ಕಾರ್ಯಕರ್ತರು ಹಾಗೂ ನಗರ ಅಭಿವೃದ್ಧಿ ಕಾರ್ಯದರ್ಶಿಗಳ ನಡುವೆ ಶನಿವಾರ ನಡೆದ ಸಂಧಾನ ಸಭೆ ವಿಫಲವಾಗಿತ್ತು. ನ್ಯಾಯಾಲಯದ ಆದೇಶವನ್ನು ಲೆಕ್ಕಿಸದ ಸಿಬ್ಬಂದಿ ಮುಷ್ಕರವನ್ನು ಮುಂದುವರಿಸಿದ್ದಾರೆ. ಇದರ ಪರಿಣಾಮವಾಗಿ ಖಾಸಗಿ ಬಸ್ ಹಾಗೂ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆೆ ಹೆಚ್ಚಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close