About Us Advertise with us Be a Reporter E-Paper

Breaking Newsದೇಶಪ್ರಚಲಿತ

ಕನ್ಹಯ್ಯ ಕುಮಾರ್ ಸೇರಿ ಮೂವರ ವಿರುದ್ಧ ಚಾರ್ಜ್‌ಶೀಟ್‌

ದೆಹಲಿ: ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ಹಯ್ಯ ಕುಮಾರ್, ಸಯ್ಯದ್ ಖಾಲಿದ್ ಹಾಗೂ ಅನಿರ್ಬಾನ್ ಭಟ್ಟಾಚಾರ್ಯ ವಿರುದ್ಧ ದೆಹಲಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಮೂರು ವರ್ಷಗಳ ಬಳಿಕ ಸೋಮವಾರ ಪೊಲೀಸರು ಪಟಿಯಾಲಾ ಹೌಸ್ ಕೋರ್ಟ್‌ಗೆ ಸುಮಾರು 1,200 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ವಿಡಿಯೋ ಸಾಕ್ಷ್ಯಗಳು ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಜತೆಗೆ ಆರೋಪ ಪಟ್ಟಿಯನ್ನು ಮುಚ್ಚಿದ ಪೆಟ್ಟಿಗೆಯೊಂದರಲ್ಲಿ ಸಲ್ಲಿಸಲಾಗಿದೆ. ಈ ಮೂವರ ವಿರುದ್ಧವೂ ಐಪಿಎಸ್ ಸೆಕ್ಷನ್ 124 ಎ(ದೇಶದ್ರೋಹ), 323(ಸ್ವಯಂ ಪ್ರೇರಿತರಾಗಿ ನೋವುಂಟು ಮಾಡುವುದು), 465(ಸುಳ್ಳು ಸೃಷ್ಟಿ), 471(ನಕಲಿ ದಾಖಲೆಗಳ ಬಳಕೆ), 143(ಕಾನೂನಿಗೆ ವಿರುದ್ಧವಾಗಿ ಸಭೆ ಸೇರುವುದು), 149(ಒಂದೇ ಉದ್ದೇಶದೊಂದಿಗೆ ಕಾನೂನಿಗೆ ವಿರುದ್ಧ ಸಭೆ), 147(ಗಲಭೆ) ಹಾಗೂ 120ಬಿ(ಅಪರಾಧ ಸಂಚು) ಅಡಿಯಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯಾರ್ಥಿ ಮುಖಂಡರಾದ ಅಪರಾಜಿತಾ ರಾಜಾ, ಶೆಹ್ಲಾ ರಶೀದ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಏಳು ವಿದ್ಯಾರ್ಥಿಗಳ ಹೆಸರಗಳ ವಿರುದ್ಧವೂ ಆರೋಪ ಪಟ್ಟಿ ಸಲ್ಲಿಸಾಗಿದೆ. ಮುಖಕ್ಕೆ ಮುಸುಕು ಹಾಕಿಕೊಂಡಿದ್ದ ಕಾಶ್ಮೀರ ಮೂಲದ ವಿದ್ಯಾರ್ಥಿಗಳು ಸಭೆಯಿಂದ ಹೊರಹೋಗುವಾಗ ಮುಸುಕು ತೆಗೆದಿದ್ದಾರೆ. ಕಾನೂನಿಗೆ ವಿರುದ್ಧವಾಗಿ ಸೇರಲಾಗಿದ್ದ ಈ ಸಭೆಯಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿರುವುದು ವಿಡಿಯೋಗಳಲ್ಲಿ ಸೆರೆಯಾಗಿದೆ. ಈ ದೇಶ ವಿರೋಧಿ ಚಟುವಟಿಕೆಯಲ್ಲಿ ಅವರು ಭಾಗಿಯಾಗಿರುವುದು ಸ್ಪಷ್ಟವಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಂದಿನ ಅಧ್ಯಕ್ಷ ಕನ್ಹಯ್ಯ ಕುಮಾರ್ ನೇತೃತ್ವದಲ್ಲಿ 2016ರ ಫೆಬ್ರುವರಿ 9ರಂದು ಪ್ರತಿಭಟನೆ ನಡೆದಿತ್ತು. ಈ ಸಭೆಯಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಸಂಸತ್ ಭವನದ ಮೇಲೆ ದಾಳಿ ಸಂಚಿನಲ್ಲಿ ಅಫ್ಜಲ್ ಗುರುವಿಗೆ ಗಲ್ಲು ಶಿಕ್ಷ ವಿರೋಧಿಸಿ ಜೆಎನ್‌ಯು ಆವರಣದಲ್ಲಿ 2016ರಲ್ಲಿ ನಡೆಸಲಾದ ಸಭೆಯಲ್ಲಿ ಆಕ್ಷೇಪಾರ್ಹ ಹಾಗೂ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಗಿತ್ತು ಎಂದು ಆರೋಪಿಸಿ ದೇಶದ್ರೋಹ ಪ್ರಕರಣ ದಾಖಲಾಗಿತ್ತು

Tags

Related Articles

Leave a Reply

Your email address will not be published. Required fields are marked *

Language
Close