About Us Advertise with us Be a Reporter E-Paper

Breaking Newsದೇಶಪ್ರಚಲಿತ

ರಾಮ್ ರಹೀಮ್ ಸಿಂಗ್‌ಗೆ ಜೀವಾವಧಿ ಶಿಕ್ಷೆ

ಪಂಚಕುಲಾ: ಪತ್ರಕರ್ತರೊಬ್ಬರನ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧಾದ ಮಾಜಿ ಮುಖ್ಯಸ್ಥ, ಸ್ವಯಂ ಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

2002ರಲ್ಲಿ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಹತ್ಯೆಯಾಗಿತ್ತು. ಇವರ ಹತ್ಯೆ ಸಂಬಂಧ ಎಲ್ಲ ನಾಲ್ವರು ಆರೋಪಿಗಳನ್ನು ತಪ್ಪಿತಸ್ಥರು ಎಂದು ಕಳೆದ ಶುಕ್ರವಾರ ಕೋರ್ಟ್ ತೀರ್ಪು ನೀಡಿತ್ತು. ಗುರುವಾರ ಸಂಜೆ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಾಗಿದೆ.

ಪ್ರಸ್ತುತ ಜೈಲು ಶಿಕ್ಷೆ ಅನುಭವಿಸುತ್ತಿರುವ 54 ವರ್ಷದ ಗುರ್ಮೀತ್ ವಿಚಾರಣೆಯನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆಸಲಾಗಿದೆ. ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಮೀತ್ ರಮ್ ರಹೀಂ ಸಿಂಗ್ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.

Tags

Related Articles

Leave a Reply

Your email address will not be published. Required fields are marked *

Language
Close