About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಸಿಎಂ ಬಜೆಟ್ ಮಂಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ

ಬೆಳಗಾವಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಫೆ.8ರಂದು ಬಜೆಟ್ ಮಂಡಿಸುವುದರಲ್ಲಿ ಯಾವುದೇ ಅನುಮಾನ ಇಲ್ಲ. ಸರಕಾರದ ಕುರಿತು ಕಾಂಗ್ರೆಸ್ ಶಾಸಕರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಯಾವುದೇ ರಾಜಕೀಯ ಬದಲಾವಣೆಗಳು ಆಗುವುದಿಲ್ಲ. ಈ ಬಗ್ಗೆ ರಾಜ್ಯದ ಜನತೆ ಆತಂಕಪಡುವ ಅಗತ್ಯ ಇಲ್ಲ ಎಂದು ಹೇಳಿದರು. ಬಿಜೆಪಿ ನಾಯಕರು ಅಧಿಕಾರ ಹಿಡಿಯಬೇಕು ಎಂಬ ಭ್ರಮೆಯಲ್ಲಿ ದಿನ ಕಳೆಯುತ್ತಿದ್ದಾರೆ. ಸಿಎಂ ಕುರ್ಚಿಗಾಗಿ ಯಡಿಯೂರಪ್ಪ ಮಾಡುತ್ತಿರುವ ಹೋಮ ಹವನಗಳು ಠುಸ್ ಆಗಿವೆ. ಇದರಿಂದ ನಮ್ಮ ಸರಕಾರಕ್ಕೆ ಯಾವುದೇ ಭಯವಿಲ್ಲ. ನಾನಂತೂ ಹೋಮ ಮಾಡುವುದಿಲ್ಲ. ನಾನು ಶಿವನ ಭಕ್ತ ಎಂದರು.

ಮುಖ್ಯಮಂತ್ರಿ ಸ್ಥಾನಕ್ಕಿಂತ ಹೆಚ್ಚಿನದಾಗಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರಕಾರದಲ್ಲಿ ಮತ್ತು ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ ನೀಡಿರುವುದರಿಂದ ಅದನ್ನು ನಿಬಾಯಿಸಿಕೊಂಡು ಹೋಗುತ್ತಿದ್ದೇನೆ ಎಂದು ಹೇಳಿದರು.

ಸಿಎಂ ರಾಜೀನಾಮೆ ಸಾಧ್ಯವಿಲ್ಲ
ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಎಲ್ಲ ಪಕ್ಷದ ಸರಕಾರದ ಅವಧಿಯಲ್ಲಿ ಶಾಸಕರ ಕಿರಿಕಿರಿ ಇರುವುದು ಸಾಮಾನ್ಯ. ಅದರಂತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಶಾಸಕರ ಕಿರಿಕಿರಿ ಇದೆ. ಹಾಗಂತ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಾಧ್ಯವಿಲ್ಲ. ಶಾಸಕ ರಮೇಶ್ ಜಾರಕಿಹೊಳಿ ನಮ್ಮ ಸಹೋದರ ಇದ್ದಂತೆ. ನಮ್ಮೊಂದಿಗೆ ಅವರು ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದಾರೆ. ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.

Tags

Related Articles

Leave a Reply

Your email address will not be published. Required fields are marked *

Language
Close