About Us Advertise with us Be a Reporter E-Paper

Breaking Newsದೇಶಪ್ರಚಲಿತ

4 ನೇ ದಿನಕ್ಕೆ ಕಾಲಿಟ್ಟ ಗುಜ್ಜಾರ್ ಪ್ರತಿಭಟನೆ

ಜೈಪುರ: ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ. 5ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಗುಜ್ಜಾರ್ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಜೈಪುರ ಮತ್ತು ಆಗ್ರಾಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ-11ರಲ್ಲಿ ಪ್ರತಿಭಟನಕಾರರು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಅಲ್ಲದೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ರೈಲುಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ 250ಕ್ಕೂ ಹೆಚ್ಚಿನ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ದೌಸಾ, ಬುಂದಿ ಮತ್ತು ಕರೌಲಿ ಜಿಲ್ಲೆಗಳಲ್ಲಿ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿ ಮಾಡಲಾಗಿತ್ತು. ಹೆದ್ದಾರಿಯಲ್ಲೇ ನಿಂತಿದ್ದ ವಾಹನಗಳಿಗೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದೌಸಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ನಿಷೇಧಾಜ್ಞೆ ಮುಂದುವರಿಕೆ:
ಧೋಲ್ಪುರ ಜಿಲ್ಲೆಯಲ್ಲಿ ಭಾನುವಾರ ಪ್ರತಿಭಟನಕಾರರು ಮೂರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಈ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಧೋಲ್ಪುರ ಮತ್ತು ಕರೌಲಿ ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಸೋಮವಾರವೂ ಮುಂದುವರಿಸಲಾಗಿತ್ತು. ಗುಜ್ಜಾರ್, ಗದಿಯಾ ಲುಹಾರ್, ಬಂಜಾರಾ, ಬದಾರಿಯಾ, ರೈಕಾ ರೆಬಾರಿ ಸಮುದಾಯಗಳಿಗೆ ಶೇಕಡಾ 5ರಷ್ಟು ಮೀಸಲಾತಿ ನಿರ್ಧಾರ ಘೋಷಿಸುವವರೆಗೂ ರೈಲು ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಗುಜ್ಜಾರ್ ನಾಯಕ ಕಿರೋರಿ ಸಿಂಗ್ ಬೈಂಸ್ಲಾ ಅವರ ಮಗ ವಿಜಯ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close