About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಕರ್ನಾಟಕದಿಂದ ಮೋದಿ ಸ್ಪರ್ಧಿಸಿ ಗೆಲ್ಲಲಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಇಪ್ಪತ್ತೆರಡು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೋದಿ ಅವರು ಕರ್ನಾಟಕದಿಂದ ಸ್ಪರ್ಧಿಸಲಿ, ಆಗ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು.

ನಗರದಲ್ಲಿ ಮಾತನಾಡಿ, ರೈತರ ಸಾಲಮನ್ನಾ ಮಾಡುವಂತೆ ಎರಡು ಬಾರಿ ನಿಯೋಗ ಹೋಗಿದೆ. ಆದರೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ನಾವು ಈ ವರ್ಷದ ಬಜೆಟ್‌ನಲ್ಲಿ ಸಾಲಮನ್ನಾಕ್ಕೆ ಹಣ ಇಟ್ಟಿದ್ದೇವೆ ಎಂದರು. ಪ್ರಧಾನಿ ಮೋದಿಯವರು ಬರೀ ಸುಳ್ಳು ಹೇಳುತ್ತಾರೆ.

ಹುಬ್ಬಳ್ಳಿಗೆ ಆಗಮಿಸಿದ್ದ ವೇಳೆ ರಫೇಲ್ ಡೀಲ್ ಬಗ್ಗೆ ಏಕೆ ಮಾತನಾಡಿಲ್ಲ ಎಂದು ಪ್ರಶ್ನಿಸಿದರು. ಆಡಿಯೊದಲ್ಲಿನ ಧ್ವನಿ ನಂದೆ ಎಂದು ಒಪ್ಪಿಕೊಂಡಿರುವ ಯಡಿಯೂರಪ್ಪ ಕೂಡಲೇ ರಾಜೀನಾಮೆ ನೀಡಬೇಕು. ಅವರಿಗೆ ಸಾರ್ವಜನಿಕ ಜೀವನದಲ್ಲಿರಲು ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags

Related Articles

Leave a Reply

Your email address will not be published. Required fields are marked *

Language
Close