About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಬಿಎಂಟಿಸಿ ಬೈಕ್‌ ಬಸ್​ ಡಿಕ್ಕಿ: ಮೂವರು ಯುವಕರು ಸಾವು

ಬೆಂಗಳೂರು: ಬಿಎಂಟಿಸಿ ಬಸ್​ ಮತ್ತು ಬೈಕ್​ ನಡುವೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಮಧ್ಯಾಹ್ನ ಬೆಂಗಳೂರಿನ ಹೊರವಲಯದ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಿಗೆರೆ ಬಳಿ‌ ಈ ಭೀಕರ ಅಪಘಾತ ಸಂಭವಿಸಿದೆ. ಮೃತ ಯುವಕರನ್ನು ಪ್ರದೀಪ್, ಅವಿನಾಶ ಹಾಗೂ ಬಸವ ಎಂದು ಗುರುತಿಸಲಾಗಿದ್ದು, ಮಡಿವಾಳ, ಹಾರೋಹಳ್ಳಿ ಹಾಗೂ ಉತ್ತರಹಳ್ಳಿ ನಿವಾಸಿಗಳು ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಬೈಕ್​ಗೆ ಬೆಂಕಿ ಹೊತ್ತಿಕೊಂಡು ಉರಿದಿವೆ. ಬಸ್​ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್​ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಅಪಘಾತದ ಬಳಿಕ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Tags

Related Articles

Leave a Reply

Your email address will not be published. Required fields are marked *

Language
Close