About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ವಿಭಜನೆ ನಿರ್ಧಾರ ಹಿಂಪಡೆಯದಿದ್ದರೆ ಪರಿಣಾಮ ನೆಟ್ಟಗಿರಲ್ಲ

ಬೆಳಗಾವಿ: ಇಲ್ಲಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ವಿಭಜನೆ ಮಾಡುತ್ತಿರುವ ಸಮ್ಮಿಶ್ರ ಸರಕಾರದ ಕ್ರಮ ಸರಿಯಲ್ಲ. ಉತ್ತರ ಕರ್ನಾಟಕ ಭಾಗಕ್ಕೆ ಮಾಡುತ್ತಿರುವ ದೊಡ್ಡ ಅನ್ಯಾಯ. ಈ ನಿರ್ಧಾರವನ್ನು ಸರಕಾರ ಹಿಂಪಡೆಯದಿದ್ದರೆ ಪರಿಣಾಮ ನೆಟ್ಟಗಿರಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ವಿಟಿಯು ಸಂಪನ್ಮೂಲಗಳ ಮೇಲೆ ಸರಕಾರದ ಕಣ್ಣು ಬಿದ್ದಿದ್ದು, ಹೇಗಾದರೂ ತಮ್ಮ ಭಾಗಕ್ಕೆ ತೆಗೆದುಕೊಂಡು ಹೋಗುವ ಪ್ರಯತ್ನ ಇದಾಗಿದೆ. ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರೇವಣ್ಣ ವಿಟಿಯು ಕ್ಯಾಂಪಸ್‌ನಲ್ಲಿ ಉಳಿದುಕೊಂಡಿದ್ದರು. ಈಗ ಅದೇ ವಿಟಿಯು ವಿಭಜಿಸಿ ಹಾಸನಕ್ಕೆ ತೆಗೆದುಕೊಂಡು ಹೋಗುವ ಹುನ್ನಾರ ನಡೆದಿದೆ.

ಸರಕಾರ ವಿಶ್ವವಿದ್ಯಾಲಯ ವಿಭಜನೆ ಮಾಡುವ ನಿರ್ಧಾರದಿಂದ ದಯಮಾಡಿ ಹಿಂದೆ ಸರಿಯುವಂತೆ ಮನವಿ ಮಾಡಿಕೊಳ್ಳುತ್ತೇನೆ. ಉನ್ನತ ಶಿಕ್ಷಣ ಸಚಿವರ ಜತೆ ಮಾತನಾಡಿದ್ದೇನೆ. ಅವರೂ ಅಸಹಾಯಕತೆ ತೋರಿಸುತ್ತಿದ್ದಾರೆ. ಉ.ಕ ಭಾಗದ ಶಾಸಕರು ಹಾಗೂ ಸಚಿವರಿಗೆ ಮುಖ್ಯಮಂತ್ರಿಗಳ ಜತೆಗೆ ಮಾತನಾಡುವ ಶಕ್ತಿ ಇಲ್ಲದಂತಾಗಿದೆ. ಅದಕ್ಕಾಗಿ ಎಲ್ಲರೂ ಧ್ವನಿ ಎತ್ತಬೇಕು ಎಂದರು.

Tags

Related Articles

Leave a Reply

Your email address will not be published. Required fields are marked *

Language
Close