About Us Advertise with us Be a Reporter E-Paper

Breaking Newsದೇಶಪ್ರಚಲಿತ

ಆರ್ಥಿಕವಾಗಿ ಭಾರತ ಬಲಿಷ್ಠ ರಾಷ್ಟ್ರ: ಮೋದಿ

ಗ್ರೇಟರ್ ನೋಯ್ಡಾ: ಆರ್ಥಿಕವಾಗಿ ಭಾರತ ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದ್ದು, 2030ರ ವೇಳೆಗೆ ಎರಡನೇ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ದೇಶವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಪೆಟ್ರೋಟೆಕ್-2019 ಸಮಾವೇಶದಲ್ಲಿ ಉದ್ಘಾಟನಾ ಭಾಷಣ ಮಾಡಿದ ಅವರು, ಐಎಂಎಫ್ ಮತ್ತು ವಿಶ್ವ ಬ್ಯಾಂಕ್‌ಗಳೂ ಇದೇ ಊಹೆಯನ್ನು ಮಾಡಿವೆ. ಅಸ್ತಿರ ಜಾಗತಿಕ ಆರ್ಥಿಕ ಪರಿಸರದ ನಡುವೆಯೂ ಭಾರತ ಅತಿ ವೇಗವನ್ನು ಕಾಯ್ದುಕೊಂಡಿದೆ ಎಂದರು.

ಪ್ರಸ್ತುತ ಭಾರತ ವೇಗವಾಗಿ ಆರ್ಥಿಕ ಬೆಳವಣಿಗೆ ಸಾಧಿಸುತ್ತಿದ್ದು, ಈಗ 6ನೇ ದೊಡ್ಡ ಆರ್ಥಿಕತೆ ಹೊಂದಿರುವ ದೇಶವಾಗಿ ಹೊರಹೊಮ್ಮಿದೆ. ಕೆಲವು ವರದಿಗಳ ಪ್ರಕಾರ 2030ರ ವೇಳೆಗೆ ಜಾಗತಿಕ ಮಟ್ಟದಲ್ಲಿ ಎರಡನೇ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರವಾಗಲಿದೆ ಎಂದರು.

ಗೋ ಋಣ ತೀರಿಸಲು ಅಸಾಧ್ಯ
ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಗೋವುಗಳ ಮಹತ್ವವನ್ನು ಮೆಲುಕು ಹಾಕಿದ ಪ್ರಧಾನಿ ಮೋದಿ ಗೋವುಗಳ ಸಂರಕ್ಷಣೆಗಾಗಿ ಸರಕಾರ ಜಾರಿಗೊಳಿಸಿರುವ ಹಲವಾರು ಯೋಜನೆಗಳನ್ನು ವಿವರಿಸಿದರು.

ಉತ್ತರ ಪ್ರದೇಶದ ವೃಂದಾವನದಲ್ಲಿ ಅಕ್ಷಯ ಪಾತ್ರಾ ಸಂಸ್ಥೆಯ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗೋವು ನೀಡುವ ಹಾಲಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಗೋವು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಅವಿಭಾಜ್ಯ ಅಂಗ ಎಂದರು. ಗ್ರಾಮೀಣ ಭಾರತದ ಹಾಸುಹೊಕ್ಕಾಗಿರುವ ಗೋವುಗಳ ರಕ್ಷಣೆಗಾಗಿ ರಾಷ್ಟ್ರೀಯ ಗೋಕುಲ್ ಮಿಷನ್ ಮತ್ತು ರಾಷ್ಟ್ರೀಯ ಕಾಮಧೇನು ಆಯೋಗವನ್ನು ರಚಿಸಲಾಗಿದೆ ಎಂದರು.

Tags

Related Articles

Leave a Reply

Your email address will not be published. Required fields are marked *

Language
Close