About Us Advertise with us Be a Reporter E-Paper

Breaking Newsದೇಶಪ್ರಚಲಿತ

ಅಖಿಲೇಶ್‌ಗೆ ತಡೆ: ಭುಗಿಲೆದ್ದ ಆಕ್ರೋಶ

ಲಖನೌ: ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಮಾಜವಾದಿ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಚೌಧರಿ ಚರಣ್‌ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆ ಹಿಡಿದಿದ್ದಾರೆ. ಅಧಿಕಾರಿಗಳ ಈ ವರ್ತನೆ ವಿರುದ್ಧ ಅಖಿಲೇಶ್ ಕೆಂಡಾಮಂಡಲವಾಗಿದ್ದು, ಹರಿಹಾಯ್ದಿದ್ದಾರೆ.

ಅಲಹಾಬಾದ್ ವಿವಿಗೆ ತೆರಳುವ ಸಲುವಾಗಿ ಅಖಿಲೇಶ್ ಅವರು ಮಂಗಳವಾರ ಲಖನೌ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅಧಿಕಾರಿಗಳು ಅವರನ್ನು ತಡೆದು ವಿಮಾನ ಏರಲು ಬಿಡಲಿಲ್ಲ. ಅಖಿಲೇಶ್ ಅವರು ಈ ವಿಷಯವನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ನಾನು ಅಲಹಾಬಾದ್ ವಿವಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಸರಕಾರಕ್ಕೆ ಹೆದರಿಕೆ ಹುಟ್ಟಿಸಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಲು ಎಸ್‌ಪಿ ಸದಸ್ಯರು ಮುಂದಾದಾಗ ಸದನದಲ್ಲಿ ಕೋಲಾಹಲ ಉಂಟಾಯಿತು. ಮುಂಚಿತವಾಗಿ ನೋಟಿಸ್ ನೀಡಿಲ್ಲವಾದ್ದರಿಂದ ಈ ವಿಷಯವನ್ನು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಲು ಸಭಾಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವಕಾಶ ನೀಡಲಿಲ್ಲ. ಆಗ ಸದನವನ್ನು ಮುಂದೂಡಲಾಯಿತು. ಮತ್ತೆ ಸದನ ಸೇರಿದಾಗಲೂ ಗದ್ದಲದ ವಾತಾವರಣ ನಿರ್ಮಾಣವಾದಾಗ ಸದನವನ್ನು ನಾಳೆಗೆ ಮುಂದೂಡಲಾಯಿತು.

ಈ ಮಧ್ಯೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕ ಮುಖಂಡರು ಅಖಿಲೇಶ್‌ಗೆ ಬೆಂಬಲ ಸೂಚಿಸಿ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close