About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ: ಪ್ರಹ್ಲಾದ್ ಮೋದಿ

ಮಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಬಂದ ಫಲಿತಾಂಶವೇ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಮರುಕಳಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, 2014ರಲ್ಲಿ ದೇಶದ ಜನತೆ ಮೋದಿ ನಾಯಕತ್ವವನ್ನು ಮೆಚ್ಚಿ ಬಿಜೆಪಿ ಪರ ಫಲಿತಾಂಶ ನೀಡಿದ್ದರು. ಇದೇ ಫಲಿತಾಂಶ 2019ರ ಲೋಕಸಭೆ ಚುನಾವಣೆಯಲ್ಲೂ ಮರುಕಳಿಸಲಿದೆ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಮತ್ತೆ ಆಡಳಿತ ಪಕ್ಷವಾಗಿ ಹೊರಹೊಮ್ಮಲಿದೆ.

ಕಳೆದ ಐದು ವರ್ಷದ ಆಡಳಿತಾವಧಿಯಲ್ಲಿ ಮೋದಿ ಸರಕಾರ ಏನು ಮಾಡಲಿಲ್ಲ ಹೇಳಿ? ಆದರೆ ಇದ್ಯಾವುದು ಕೂಡ ಕಾಂಗ್ರೆಸ್ ಮನೆಗೆ ತಲುಪಲಿಲ್ಲ ಎಂದರು. ಪ್ರಹ್ಲಾದ್ ಮೋದಿ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಾರೆ ಎನ್ನುವ ವದಂತಿಗೆ ಉತ್ತರಿಸಿದ ಅವರು, ನಾನು ಯಾರನ್ನೂ ಭೇಟಿಯಾಗಿಲ್ಲ, ಕೋಲ್ಕತಾಕ್ಕೂ ಭೇಟಿ ನೀಡಿಲ್ಲ. ಇದೊಂದು ಸಂಪೂರ್ಣ ಸುಳ್ಳು ಸುದ್ದಿ ಎಂದರು.

Tags

Related Articles

Leave a Reply

Your email address will not be published. Required fields are marked *

Language
Close