About Us Advertise with us Be a Reporter E-Paper

Breaking Newsದೇಶಪ್ರಚಲಿತ

ಮೈತ್ರಿಗೆ ಮುಂದಾದ ಕಾಂಗ್ರೆಸ್‌‌- ಆಪ್‌

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೋಕಸಭಾ ಚುನಾವಣೆಗೆ ಎಎಪಿಯೊಂದಿಗೆ ಮೈತ್ರಿಗೆ ನಿರಾಕರಿಸಿ ಏಕಾಂಗಿಯಾಗಿ ಬಿಜೆಪಿಯನ್ನು ಎದುರಿಸಲು ನಿರ್ಧರಿಸಿದ್ದ ಕಾಂಗ್ರೆಸ್ ಇದೀಗ ತನ್ನ ನಿಲುವನ್ನು ಬದಲಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆಪ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡರೆ ಬಿಜೆಪಿಯನ್ನು ಸುಲಭವಾಗಿ ಮಣಿಸಬಹುದು ಎನ್ನುವ ಲೆಕ್ಕಾಚಾರಕ್ಕೆ ಕಾಂಗ್ರೆಸ್ ಬಂದಿದೆ. ಈ ಸಂಬಂಧ ಆಪ್ ಮುಖಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಶೀಘ್ರದಲ್ಲೇ ಮಾತುಕತೆ ನಡೆಸುವ ಸಾಧ್ಯತೆಗಳಿವೆ.

ದೆಹಲಿಯಲ್ಲಿ ಕಾಂಗ್ರೆಸ್ ನಡೆಸಿದ ಚುನಾವಣಾ ಪೂರ್ವ ಆಂತರಿಕ ಸಮೀಕ್ಷೆಯಲ್ಲಿ ಆಪ್ ಹಾಗೂ ಕಾಂಗ್ರೆಸ್‌ಗಿಂತ ಬಿಜೆಪಿ ಮುಂದಿದೆ ಎನ್ನುವುದು ತಿಳಿದು ಬಂದಿದೆ. ಇದರಿಂದ ಕಂಗಾಲಾಗಿರುವ ಕಾಂಗ್ರೆಸ್, ಮೈತ್ರಿಗೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಕೇಜ್ರಿವಾಲ್ ಅವರೇ ಮೈತ್ರಿಗೆ ಮುಂದಾಗಿದ್ದರೂ ಕಾಂಗ್ರೆಸ್ ಆಸಕ್ತಿ ತೋರಿಸಿರಲಿಲ್ಲ. ದೆಹಲಿಯಲ್ಲಿ ಕಾಂಗ್ರೆಸ್ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿಗೆ ಶೇ.35, ಆಪ್‌ಗೆ ಶೇ.28 ಹಾಗೂ ಕಾಂಗ್ರೆಸ್ ಶೇ. 22ರಷ್ಟು ಮತಬ್ಯಾಂಕ್ ಹೊಂದಿದೆ ಎಂದು ತಿಳಿದು ಬಂದಿದೆ.

ಆಪ್ ಹಾಗೂ ಕಾಂಗ್ರೆಸ್ ಮತಗಳು ಒಗ್ಗೂಡಿದರೆ ರಾಜಧಾನಿ ದೆಹಲಿಯ ಎಲ್ಲ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿಕೂಟ ಸುಲಭವಾಗಿ ಜಯಗಳಿಸಬಹುದು ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ. ಈ ಬೆಳವಣಿಗೆಗಳ ನಂತರ ಆಪ್ ಜತೆ ಮೈತ್ರಿಗೆ ಅಡ್ಡಗಾಲು ಹಾಕಿದ್ದ ದೆಹಲಿ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ವರೂ ಸಹ ಮೈತ್ರಿಗೆ ಹಸಿರು ನಿಶಾನೆ ತೋರಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಾರೆ. ಒಂದು ವೇಳೆ ದೆಹಲಿಯಲ್ಲಿ ಮೈತ್ರಿ ಯಸ್ವಿಯಾದರೆ ಹರಿಯಾಣದಲ್ಲೂ ಕಾಂಗ್ರೆಸ್-ಎಎಪಿ ಮೈತ್ರಿ ಸಾಧ್ಯವಾಗಲಿದೆ.

Tags

Related Articles

Leave a Reply

Your email address will not be published. Required fields are marked *

Language
Close