ಬೋನಿಗೆ ಬಿದ್ದ ಐದು ವರ್ಷದ ಹೆಣ್ಣು ಚಿರತೆ

Posted In : ರಾಜ್ಯ, ರಾಮನಗರ

ರಾಮನಗರ: ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಐದು ವರ್ಷದ ಹೆಣ್ಣು ಚಿರತೆ ಸೆರೆಯಾಗಿರುವ ಘಟನೆ ತಾಲೂಕಿನ ಕೆಂಜಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಿದ್ದ ಕಾರಣ ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯಧಿಕಾರಿಗಳು ಬಸಪ್ಪ ಎಂಬುವವರ ಜಮೀನಿನಲ್ಲಿ ಬೋನನ್ನು ಇಟ್ಟಿದ್ದರು. ಸೋಮವಾರ ಮುಂಜಾನೆ ಆಹಾರ ಅರಸಿ ಬಂದ ಚಿರತೆ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ. ಅರಣ್ಯಾಧಿಕಾರಿಗಳು ಚಿರತೆಯನ್ನು ಬೋನಿನ ಸಮೇತ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *

5 × 5 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top