About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಮಂಡ್ಯದಿಂದ ಚುನಾವಣೆಗೆ ಅಂಬಿ ಪುತ್ರ ಅಭಿಷೇಕ್ ಕಣಕ್ಕಿಳಿಸಲು ಒತ್ತಾಯ

ಮಂಡ್ಯ: ಒಂದೆಡೆ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದಿಂದ ಸ್ಪರ್ಧಿಸುವಂತೆ ಜೆಡಿಎಸ್ ಮುಖಂಡರು, ಅಭಿಮಾನಿಗಳು ಬ್ಯಾಟಿಂಗ್ ಶುರು ಮಾಡಿದ್ದಾರೆ. ಇನ್ನೊಂದೆಡೆ ದಿವಗತಂ ಅಂಬರೀಷ್ ಪುತ್ರ ಅಭಿಷೇಕ್ ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದುರ ಕಾಂಗ್ರೆಸ್ ಕಾರ್ಯಕರ್ತರಿಂದ ಒತ್ತಡ ಶುರುವಾಗಿದೆ.

ಈ ಸಂಬಂಧ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್​ ಉಪಾಧ್ಯಕ್ಷ ಅರವಿಂದ್ ಕುಮಾರ್, “ನಾಲ್ಕು ತಿಂಗಳ ಹಿಂದೆ ಸಂಸದರಾಗಿದ್ದ ಎಲ್.ಆರ್.ಶಿವರಾಮೇಗೌಡ ಕೈಬಿಟ್ಟು ನಿಖಿಲ್​​ಗೆ ಮಣೆ ಹಾಕಲು ಜೆಡಿಎಸ್ ಹೊರಟಿದೆ. ಮಂಡ್ಯಕ್ಕೆ ನಿಖಿಲ್ ಕುಮಾರಸ್ವಾಮಿ ಬರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ರು. ಕಾಂಗ್ರೆಸ್‍ನ ದಿ.ಅಂಬರೀಶ್ ಪುತ್ರ ಅಭಿಷೇಕ್ ಅವರನ್ನು ಮಂಡ್ಯ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಲಿ. ಒಂದು ವೇಳೆ ಮೈತ್ರಿಯಾದರೂ ಜೆಡಿಎಸ್ ಪಕ್ಷ ಅಭಿಷೇಕ್​​ಗೆ ಟಿಕೆಟ್ ಕೊಡಬೇಕು. ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ನಮ್ಮ ಸಂಪೂರ್ಣ ವಿರೋಧ ಇದೆ” ಎಂದು ಹೇಳಿದ್ರು.

Tags

Related Articles

Leave a Reply

Your email address will not be published. Required fields are marked *

Language
Close