About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೇವೆಂದ್ರಪ್ಪಾ ಮನೆ ಮೇಲೆ ಎಸಿಬಿ ದಾಳಿ

ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆಯ ಆರೋಪದ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ

ಕಲಬುರಗಿ: ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆಯ ಆರೋಪದ ಮೇರೆಗೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೇವೆಂದ್ರಪ್ಪಾ ಬಿರಾದರ್‍‍ ಅವರ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದಾರೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಅವರ ಆಪ್ತ ಕಾರ್ಯದರ್ಶಿ ಆಗಿರುವ ದೇವೆಂದ್ರಪ್ಪಾ, ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿತ್ತು. ಈ ಕುರಿತಾಗಿ ಮಂಗಳವಾರ ಬೆಳಗ್ಗೆ ಎಸಿಬಿ ದಾಳಿ ನಡೆಸಿದೆ.

ದೇವೆಂದ್ರಪ್ಪಾ ಅವರ ಜಯನಗರದಲ್ಲಿರುವ ಮನೆ ಸೇರಿದಂತೆ ರಾಮ ಮಂದಿರ ಬಳಿಯಿರುವ ಮನೆ ಮತ್ತು ಕಾಂಪ್ಲೆಕ್ಸ್ ಮೇಲೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close