About Us Advertise with us Be a Reporter E-Paper

Breaking Newsಪ್ರಚಲಿತಸಿನಿಮಾಸ್
Trending

ನಟ ಕಿಚ್ಚ ಸುದೀಪ್, ನಿರ್ದೇಶಕ ಪ್ರೇಮ್ ವಿರುದ್ಧ ದೂರು

ಬೆಂಗಳೂರು: ನಿರ್ದೇಶಕ ಪ್ರೇಮ್ ಹಾಗೂ ಕಿಚ್ಚ ಸುದೀಪ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ.

ಇತ್ತೀಚೆಗೆ ತೆರೆಕಂಡ ದಿ-ವಿಲನ್ ಚಿತ್ರದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಎಂಬುವವರು ನಿರ್ದೇಶಕ ಪ್ರೇಮ್ ಹಾಗೂ ನಟ ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು ನೀಡಿದ್ದಾರೆ.

ಈ ಸಿನಿಮಾದ ಹಾಡೊಂದರಲ್ಲಿ ಸುದೀಪ್​ ಕನ್ನಡದ ಬಾವುಟವನ್ನು ಸೊಂಟಕ್ಕೆ ಕಟ್ಟಿಕೊಳ್ಳುವ ಮೂಲಕ ಅದಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ದೂರು ನೀಡಿದೆ. ಈ ಬಗ್ಗೆ ನಿರ್ದೇಶಕ ಪ್ರೇಮ್ ಹಾಗೂ ಸುದೀಪ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಿನಿಮಾ ರಿಲೀಸ್ ಮಾಡಲು ಬಿಡುವುದಿಲ್ಲ ಎಂದು ಸಂಘಟನೆ ತಿಳಿಸಿದೆ.

Tags

Related Articles

Leave a Reply

Your email address will not be published. Required fields are marked *

Language
Close