About Us Advertise with us Be a Reporter E-Paper

Breaking Newsದೇಶಪ್ರಚಲಿತ

ಕೇರಳ, ಕೊಡಗು ಬಳಿಕ ನಾಗಾಲ್ಯಾಂಡ್ ನಲ್ಲಿ ವರುಣನ ಅಬ್ಬರ (ವಿಡಿಯೊ)

ಕೊಹಿಮಾ: ಕೇರಳ, ಕರ್ನಾಟಕದ ಕೊಡಗು ಆಯ್ತು ಇದೀಗ ನಾಗಲ್ಯಾಂಡ್ ನಲ್ಲಿ ವರುಣರಾಯ ಅಬ್ಬರಿಸುತ್ತಿದ್ದಾನೆ. ಕಳೆದ ಒಂದು ವಾರದಿಂದ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರವಾಹ ಹಾಗೂ ಭೂಕುಸಿತದಿಂದ ಈವರೆಗೆ 12 ಮಂದಿ ಮೃತಪಟ್ಟಿದ್ದು, ಸುಮಾರು 3,000 ಮಂದಿಯನ್ನು ಸುರಕ್ಷಿತ ಸ್ಥಳಗಳತ್ತ ರವಾನಿಸಲಾಗಿದೆ ಎನ್ನಲಾಗಿದೆ. ನಾಗಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೊ ಈ ಬಗ್ಗೆ ಟ್ವಿಟ್ಟರ್ ನಲ್ಲಿ ವಿಡಿಯೊ ಸಹಿತ ಟ್ವೀಟ್ ಮಾಡಿದ್ದು, ಕೇಂದ್ರ ಸರಕಾರ ಸಹಾಯಕ್ಕೆ ಧಾವಿಸುವಂತೆ ಮನವಿ ಮಾಡಿದ್ದಾರೆ.

ಸಿಎಂ ನೀಫಿಯು ಮನವಿಗೆ ಕೂಡಲೇ ಸ್ಪಂದಿಸಿದ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಎನ್‍ಡಿಆರ್ ಎಫ್ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಲ್ಲದೆ ಟ್ವಿಟ್ಟರ್ ನಲ್ಲಿ ಬ್ಯಾಂಕ್ ಖಾತೆಯ ವಿವರವನ್ನೂ ಹಾಕಿರುವ ನಾಗಾಲ್ಯಾಂಡ್ ಸಿಎಂ ಪರಿಹಾರ ನಿಧಿಗೆ ಹಣ ನೀಡುವಂತೆ ಮನವಿ ಮಾಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close